ಭೀಕರ ಅಪಘಾತ: ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ, ತಂದೆ, ಮಗಳು ಸ್ಥಳದಲ್ಲೇ ಸಾವು
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹೊರವಲಯದ ಸ್ತವನಿಧಿ ಘಾಟ್ನಲ್ಲಿ ಬೈಕ್ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಮುಖ್ಯಪೇದೆ ಪುಂಡಲೀಕ ಹಟ್ಟಿ ಮತ್ತು ಅವರ ಮಗಳು ನಿಖಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಸ್ತವನಿಧಿ ಘಾಟ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ತಂದೆ ಮತ್ತು ಮಗಳು ಮೃತಪಟ್ಟಿದ್ದಾರೆ. ಬೈಕ್ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರನ್ನು ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಪುಂಡಲೀಕ ಹಟ್ಟಿ (50) ಮತ್ತು ಅವರ ಮಗಳು ನಿಖಿತಾ (24) ಎಂದು ಗುರುತಿಸಲಾಗಿದೆ. ಪುಂಡಲೀಕ ಹಟ್ಟಿ ಅವರು ನಿಪ್ಪಾಣಿ ಟೌನ್ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: 25 ವರ್ಷದ ಯುವಕನಿಗೆ ಬಲವಂತವಾಗಿ ಗುಪ್ತಾಂಗದ ಶಸ್ತ್ರಚಿಕಿತ್ಸೆ; ಮಂಗಳಮುಖಿಯರು ಅರೆಸ್ಟ್
ತಂದೆ ಮತ್ತು ಮಗಳು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ತವನಿಧಿ ಘಾಟ್ನ ಸ್ಪೀಡ್ ಬ್ರೇಕರ್ (Speed Breaker) ಬಳಿ ಬೈಕ್ನ ವೇಗವನ್ನು ಕಡಿಮೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಲಾರಿ ಬೈಕ್ಗೆ ಏಕಾಏಕಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಬೈಕ್ನಿಂದ ರಸ್ತೆಗೆ ಬಿದ್ದ ತಂದೆ-ಮಗಳ ಮೇಲೆ ಲಾರಿ ಹರಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆಯಿಂದ ಪೊಲೀಸ್ ಇಲಾಖೆ ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಅಪಘಾತವು ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ, ತನಿಖೆ ಮುಂದುವರೆದಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



