Pradeep Eshwar: ಬಿದ್ದು, ಕಾಲು ಮುರಿದುಕೊಂಡ ಶಾಸಕ ಪ್ರದೀಪ್‌ ಈಶ್ವರ್; ಎಲ್ಲಾ ವದಂತಿಗಳಿಗೆ ತೆರೆ! ಇಲ್ಲಿದೆ ಅಪ್ಡೇಟ್

Pradeep Eshwar: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಕಾಲು ಮುರಿತದಿಂದ ವಿಶ್ರಾಂತಿಯಲ್ಲಿದ್ದಾರೆ. ವೈದ್ಯರು ಆರು ವಾರ ವಿಶ್ರಾಂತಿಗೆ ಸೂಚಿಸಿದ್ದರೂ, ಶಾಲೆಯಲ್ಲೇ ಹಾಸಿಗೆ ಹಾಕಿಸಿಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡುವ ಜೊತೆಗೆ ಕ್ಷೇತ್ರದ ಕೆಲಸಗಳನ್ನೂ ಮುಂದುವರಿಸಿದ್ದಾರೆ.

ಕಾಲಿಗೆ ಗಂಭೀರ ಗಾಯವಾಗಿದ್ದರೂ ತಮ್ಮ ಕೆಲಸದಿಂದ ಹಿಂದೆ ಸರಿಯಲು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸಿದ್ಧರಿಲ್ಲ. ಕಳೆದ ಕೆಲವು ದಿನಗಳಿಂದ ಅವರು ಬಿದ್ದು ಕಾಲು ಮುರಿದುಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ತಾವು ಕೆಲವು ದಿನಗಳ ಹಿಂದೆ ಗಂಭೀರವಾಗಿ ಬಿದ್ದಿದ್ದಾಗಿ ತಿಳಿಸಿರುವ ಅವರು, ವೈದ್ಯರು ಆರು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ಶಿಕ್ಷಕನಾಗಿ ಮತ್ತು ಜನಪ್ರತಿನಿಧಿಯಾಗಿ ಮಾಡಬೇಕಾದ ಕೆಲಸಗಳನ್ನು ಬಿಟ್ಟು ಸುಮ್ಮನೆ ಇರಲು ಸಾಧ್ಯವಾಗುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದಕ್ಕಾಗಿ ಶಾಲೆಯ ತರಗತಿಯಲ್ಲೇ ಹಾಸಿಗೆಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಲ್ಲಿಂದಲೇ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಪಾಠ ಮಾಡುತ್ತಿದ್ದಾರೆ. ಇದರ ಜೊತೆಗೆ ಕ್ಷೇತ್ರದ ಜನರ ಸಮಸ್ಯೆಗಳು ಮತ್ತು ಆಡಳಿತಾತ್ಮಕ ಜವಾಬ್ದಾರಿಗಳನ್ನೂ ನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಬರೆದುಕೊಂಡಿರುವ ಪ್ರದೀಪ್ ಈಶ್ವರ್, ಪರಿಸ್ಥಿತಿಗಳು ಕೆಲಸದ ವೇಗವನ್ನು ಕಡಿಮೆ ಮಾಡಬಹುದು. ಆದರೆ ನಾವು ನಂಬಿರುವ ಕೆಲಸವನ್ನು ಮುಂದುವರಿಸುವುದರಿಂದ ತಡೆಯಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ.

ಬಸವಣ್ಣನವರ ‘ಕಾಯಕವೇ ಕೈಲಾಸ’ ಎಂಬ ವಚನದ ಆಶಯವನ್ನು ಉಲ್ಲೇಖಿಸಿರುವ ಅವರು, ಆರೋಗ್ಯದ ಸಮಸ್ಯೆಯ ನಡುವೆಯೂ ತಮ್ಮ ಕರ್ತವ್ಯ ಮುಂದುವರಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ತಮ್ಮ ಆರೋಗ್ಯದ ಬಗ್ಗೆ ಹರಡಿದ್ದ ವದಂತಿಗಳಿಗೆ ಸ್ವತಃ ಶಾಸಕರೇ ತೆರೆ ಎಳೆದಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

TRENDING ARTICLES1 / 4

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories