ಪಡಿತರ ಚೀಟಿ (ration card) ಬಹಳ ಮುಖ್ಯವಾಗಿರುವ ಗುರುತಿನ ಚೀಟಿ ಆಗಿರುವ ಹಿನ್ನೆಲೆಯಲ್ಲಿ ಎಷ್ಟೋ ಕುಟುಂಬಗಳು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವ ಸಲುವಾಗಿ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಈಗಾಗಲೇ ಸಲ್ಲಿಕೆಯಾಗಿರುವ ಮೂರು ಲಕ್ಷ ಹೊಸ ಪಡಿತರ ಚೀಟಿ ಅರ್ಜಿ (new ration card application) ಗಳನ್ನು ಹೊರತುಪಡಿಸಿ ಮತ್ತೆ ಕೂಡ ಸಾಕಷ್ಟು ಜನ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ.
ಸೈಟ್ ಹಾಗೂ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನ! ಅತಿ ಕಡಿಮೆ ಬೆಲೆಗೆ ಖರೀದಿಸುವ ಅವಕಾಶ
ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಸರ್ಕಾರ!
ಹೌದು ಸರ್ಕಾರ ಈ ಹಿಂದೆ ಒಂದು ಪ್ರಕಟಣೆಯನ್ನು ಹೊರಡಿಸಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಆ ಪ್ರಕಟಣೆಯಲ್ಲಿ ಇರುವಂತೆ ನವೆಂಬರ್ 29, 30 ಹಾಗೂ ಡಿಸೆಂಬರ್ ಮೂರನೇ ತಾರೀಕಿನಂದು ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿತ್ತು, ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಿ ಕೊಡಲಾಗಿದೆ, ಎನ್ನಲಾಗಿತ್ತು.
ಹಿನ್ನೆಲೆಯಲ್ಲಿ ಸಾಕಷ್ಟು ಜನ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ದಾಖಲೆಗಳ ಸಮೇತ ಗ್ರಾಮ ಒನ್, ಬಾಪೂಜಿ ಕೇಂದ್ರ ಮೊದಲಾದ ಸೇವಾ ಕೇಂದ್ರಗಳಲ್ಲಿ ಕಿಕ್ಕಿರಿದು ಸೇರಿದ್ದರು. ಆದರೆ ಅಷ್ಟರಲ್ಲೆ ಇದೊಂದು ಕೇವಲ ವದಂತಿ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೌದು, ಸರ್ಕಾರ ಈಗಾಗಲೇ ತಿಳಿಸಿರುವಂತೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಒಂದು ದಿನದ ಅವಕಾಶವನ್ನು ಸರ್ಕಾರ ಮಾಡಿಕೊಟ್ಟಿಲ್ಲ. ಇದು ಕೇವಲ ವದಂತಿ (rumours) ಅಷ್ಟೇ, ಅಂತಹ ಯಾವುದೇ ಪ್ರಕಟಣೆಯನ್ನು ಸರ್ಕಾರ ಹೊರಡಿಸಿಲ್ಲ.
ಇಂತಹ ರೈತರಿಗೆ ₹2000 ಸಹಾಯಧನ, ಪಟ್ಟಿ ಬಿಡುಗಡೆ; ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿಕೊಳ್ಳಿ
ಸದ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ, ಹೀಗಿರುವ ಹಳೆಯ ಪಡಿತರ ಚೀಟಿ ಅರ್ಜಿಯನ್ನು ಮೊದಲು ವಿಲೇವಾರಿ ಮಾಡಬೇಕು. ನಂತರವಷ್ಟೇ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಆದರೆ ಈಗಾಗಲೇ ಪ್ರಕಟಿಸಿದ್ದ ದಿನಾಂಕದ ಬಗ್ಗೆ ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ. ಈಗಾಗಲೇ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಸರ್ಕಾರ, ಡಿಸೆಂಬರ್ 3ಕ್ಕೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಎನ್ನುವ ಪ್ರಕಟಣೆ ತಪ್ಪಾಗಿ ಮುದ್ರಣ ಹೊಂದಿರುವ ದಿನಾಂಕ ಎಂದು ಹೇಳಲಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಸಮಸ್ಯೆ ಇಲ್ಲದೆ ನಿಮ್ಮ ಖಾತೆ ಸೇರುತ್ತೆ ಹಣ
ಒಂದು ದಿನದ ಅವಕಾಶ ಕೊಟ್ರೆ ಯಾರಿಗೂ ಸಿಗಲ್ಲ ಪಡಿತರ ಚೀಟಿ!
ಸೇವಾ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಆತಂಕ. ಇದು ಕೇವಲ ಒಂದು ದಿನದ ಅವಕಾಶ ನೀಡಿದರೆ ಯಾರಿಗೂ ಕೂಡ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಜನರ ನೂಕು ನುಗ್ಗಲು ಜಾಸ್ತಿಯಾಗುತ್ತದೆ ಹಾಗೂ ಸರ್ವರ್ ಸಮಸ್ಯೆ (server problem) ಕೂಡ ಆರಂಭವಾಗುತ್ತದೆ.
ಈ ಹಿನ್ನೆಲೆಯಲ್ಲಿ ವಿಭಾಗವಾರು ವಿಂಗಡಣೆ ಮಾಡಿ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಹಲವರ ಒತ್ತಾಯವಾಗಿದೆ. ಆದರೆ ಸದ್ಯಕ್ಕಂತೂ ಸರ್ಕಾರ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವ ಅವಕಾಶ ಮಾಡಿಕೊಡುವ ನಿರೀಕ್ಷೆಯಿಲ್ಲ.
ನಿಮ್ಮ ಜಮೀನಿಗೆ ಕಾಲುದಾರಿ, ಬಂಡಿದಾರಿ ಇದೆಯೋ ಇಲ್ವೋ ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ
Presently no opportunity to submit new ration card application
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.