ಈ ವಾರ ಗುಡುಗು ಸಹಿತ ಮಳೆ ಖಚಿತ! ಕರ್ನಾಟಕ ರಾಜ್ಯಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ

Karnataka Rains: ಕರ್ನಾಟಕ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ ಒಂದು ವಾರದಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲಿನ ನಡುವೆಯೇ ಮಳೆಯ ಲಕ್ಷಣಗಳು ಕಾಣಿಸುತ್ತಿವೆ.

Karnataka Rains: ಕರ್ನಾಟಕ ರಾಜ್ಯದ ಹಲವಾರು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪಮಾನ ಹೆಚ್ಚಾಗಿ ಜನರು ಕಂಗೆಟ್ಟಿದ್ದಾರೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ಅನೇಕ ನಗರಗಳಲ್ಲಿ ಮಧ್ಯಾಹ್ನದ ಹೊತ್ತಿನಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಜನರು ಹೊರಗೆ ಹೋಗಲು ಕೂಡ ಹಿಂಜರಿಯುವಂತಾಗಿದೆ.

ಈ ಬಿಸಿಲಿನ ನಡುವೆಯೇ ಈಗ ರಾಜ್ಯಕ್ಕೆ ಮಳೆಯ ಮುನ್ಸೂಚನೆ ಬಂದಿದ್ದು, ಮುಂದಿನ ಒಂದು ವಾರದಲ್ಲಿ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾರ್ಚ್ ಮಧ್ಯಭಾಗದಿಂದ ಮಳೆಯ ಸಾಧ್ಯತೆ

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಪ್ರಸ್ತುತ ಬಿಸಿಲಿನ ಜೊತೆಗೆ ಉಷ್ಣಾಂಶ ಹೆಚ್ಚಳ ಕಂಡುಬರುತ್ತಿದೆ. ಆದರೆ ಮಾರ್ಚ್ 15 ಅಥವಾ 16ರಿಂದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದರಿಂದ ಉಷ್ಣಾಂಶ ಸ್ವಲ್ಪ ಮಟ್ಟಿಗೆ ಇಳಿಯುವ ನಿರೀಕ್ಷೆಯೂ ಇದೆ.

ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ, ವಿಶೇಷವಾಗಿ ಮೈಸೂರು ಭಾಗದಲ್ಲಿ ಸಂಜೆ ಅಥವಾ ರಾತ್ರಿ ವೇಳೆ ತುಂತುರು ಮಳೆಯಾಗುವ ಲಕ್ಷಣಗಳು ಕಾಣಿಸುತ್ತಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮಧ್ಯೆ ಮಧ್ಯೆ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಿಂದ ಗಾಳಿಯ ಪರಿಣಾಮ

ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯು ಹೆಚ್ಚು ಪ್ರಭಲವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ನಿರ್ಮಾಣವಾಗುತ್ತಿದೆ. ಇದೇ ಕಾರಣದಿಂದ ಮುಂದಿನ ದಿನಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಮುಂದಿನ 7 ದಿನಗಳಲ್ಲಿ ರಾಜ್ಯದ ನಾಲ್ಕೂ ವಲಯಗಳಲ್ಲಿ, ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳು ಕಾಣಿಸುತ್ತಿರುವುದರಿಂದ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ಜನರಿಗೆ ಎಚ್ಚರಿಕೆ

ಭಾರೀ ಬಿಸಿಲಿನ ಕಾರಣದಿಂದ ಈಗಾಗಲೇ ಮಕ್ಕಳು ಮತ್ತು ವೃದ್ಧರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿರುವುದಾಗಿ ವೈದ್ಯರು ಹೇಳುತ್ತಿದ್ದಾರೆ. ಆದ್ದರಿಂದ ಮಧ್ಯಾಹ್ನ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸುವುದು ಒಳಿತು ಎಂದು ಸಲಹೆ ನೀಡಲಾಗಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಬೆಳಗ್ಗೆ ಸುಮಾರು 9 ಗಂಟೆಯವರೆಗೆ ಮಂಜು ಇರುವುದರಿಂದ ವಾಹನ ಸವಾರರಿಗೆ ದೃಶ್ಯತೆ ಕಡಿಮೆಯಾಗಿ ಸಂಚಾರದಲ್ಲಿ ತೊಂದರೆ ಉಂಟಾಗುತ್ತಿದೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories