ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಜನರು ತೊಲಗಿಸಬೇಕು: ಕಾಂಗ್ರೆಸ್ ವರಿಷ್ಠ ರಣದೀಪ್ ಸಿಂಗ್ ಸುರ್ಜೇವಾಲಾ
ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಜನತೆ ತೊಲಗಿಸಬೇಕು ಎಂದು ಕಾಂಗ್ರೆಸ್ ವರಿಷ್ಠ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಬಾಗಲಕೋಟೆ (Bagalkot): ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಜನತೆ ತೊಲಗಿಸಬೇಕು ಎಂದು ಕಾಂಗ್ರೆಸ್ ವರಿಷ್ಠ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭರವಸೆ ಈಡೇರಿಸುವುದಾಗಿ ಖಾತರಿ ಕಾರ್ಡ್ ವಿತರಿಸುವ ಕಾರ್ಯಕ್ರಮ ನಡೆಯಿತು. ಹಿರಿಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಉಪಸ್ಥಿತರಿದ್ದರು. ನಂತರ ಸುದ್ದಿಗಾರರೊಂದಿಗೆ ನಡೆಸಿದ ಸಂದರ್ಶನದಲ್ಲಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ 2000 ರೂ. ಮನೆಗಳಿಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಇದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ 40% ಭ್ರಷ್ಟಾಚಾರ ನಡೆಯುತ್ತಿದೆ. ಇದು 40 % ಕಮಿಷನ್ ಆಡಳಿತವಾಗಿದೆ ಎಂದರು..
ಈ ಆಡಳಿತದ ವಿರುದ್ಧ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಜನರು ತೊಲಗಿಸಬೇಕು. 40% ಕಮಿಷನ್ ಪಡೆಯುವ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಬೇಕು. ಕಾಂಗ್ರೆಸ್ ನೀಡಿದ ಭರವಸೆಗಳನ್ನು ನೂರಕ್ಕೆ ನೂರು ಈಡೇರಿಸುತ್ತೇವೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಭರವಸೆಗಳನ್ನು ನೂರಕ್ಕೆ ನೂರು ಈಡೇರಿಸಲಾಗಿತ್ತು ಎಂದರು.
Randeep Singh Surjewala said that the people should remove the dictatorial rule of BJP
Follow us On
Google News |
Advertisement