Welcome To Kannada News Today

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ

Rani Channamma University 8th Convocation : ಸುವರ್ಣ ವಿಧಾನಸೌಧದ ಆಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ (ಅ.5) ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ

🌐 Kannada News :

( Kannada News ) ಬೆಳಗಾವಿ : ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ವಜೂಭಾಯ್ ರೂಡಾಭಾಯ್ ವಾಲಾರವರು ರ‍್ಯಾಂಕ್ ವಿಜೇತರಿಗೆ ಸುವರ್ಣ ಪದಕಗಳು, 79 ಜನರಿಗೆ ಪಿಎಚ್.ಡಿ ಮತ್ತು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಸುವರ್ಣ ವಿಧಾನಸೌಧದ ಆಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ (ಅ.5) ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದ ಸಮಾರಂಭದಲ್ಲಿ ಸುವರ್ಣ ಪದಕಗಳು ಮತ್ತು ಪದವಿಗಳನ್ನು ಪ್ರದಾನ ಮಾಡಲಾಯಿತು.

ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಆನ್ ಲೈನ್ ಮೂಲಕವೇ ಘಟಿಕೋತ್ಸವ ಭಾಷಣ ಮಾಡಿದ ಬೆಂಗಳೂರಿನ ನ್ಯಾಕ್ ನಿರ್ದೇಶಕರಾದ ಪ್ರೊ.ಎಸ್.ಸಿ. ಶರ್ಮಾ, ರಾಷ್ಟ್ರ ನಿರ್ಮಾಣದ ಪ್ರಕ್ರಿಯೆಯಲ್ಲಿ ರಾಷ್ಟ್ರೀಯವಾದ ಅಥವಾ ರಾಷ್ಟ್ರೀಯತೆಯ ಪಾತ್ರ ಪ್ರಮುಖ ಪಾತ್ರ ವಹಿಸಲಿದೆ ಎಂದರು.

ನವ ಪದವೀಧರರು ದೇಶದ ಪ್ರಗತಿಯ ಚಕ್ರಗಳಿದ್ದಂತೆ. ಆದ್ದರಿಂದ ಎಲ್ಲರೂ ಭಾರತೀಯತೆಯನ್ನು ಮೈಗೂಡಿಸಿಕೊಂಡು ಭವಿಷ್ಯದ ನಾಯಕರಾಗಿ ಹೊರಹೊಮ್ಮಬೇಕು ಎಂದು ಪ್ರೊ.ಶರ್ಮಾ ಕರೆ ನೀಡಿದರು.

ಚಾಣಕ್ಯ ನೀತಿಯಲ್ಲಿ ಉಲ್ಲೇಖಿಸಿರುವಂತೆ ಜ್ಞಾನವನ್ನು ಮಾತೃಸ್ಥಾನಕ್ಕೆ ಹೋಲಿಕೆ ಮಾಡಲಾಗಿದ್ದು, ಅನಾದಿ ಕಾಲದಿಂದಲೂ ಶಿಕ್ಷಣಕ್ಕೆ ನೀಡಲಾಗಿರುವ ಮಹತ್ವವನ್ನು ಇದು ತೋರಿಸುತ್ತದೆ.

Rani Channamma University 8th Convocation
Rani Channamma University 8th Convocation

ಸ್ವಾತಂತ್ರ್ಯದ ಕಿಡಿ ಹೊತ್ತಿಸಿದ ರಾಣಿ ಚನ್ನಮ್ಮ ಅವರನ್ನು ಸ್ಮರಿಸಿದ ಅವರು, ಮಹಾತ್ಮರು ಎಂದಿಗೂ ಅಜರಾಮರರಾಗಿರುತ್ತಾರೆ ಎಂದರು.
ಅಕ್ಕಮಹಾದೇವಿ ಅವರ ‘ಎನ್ನ ನಾನರಿಯದಂದು ಮುನ್ನ ನೀನೆಲ್ಲಿರ್ದೆ ಹೇಳಯ್ಯ’ ಎಂಬ ವಚನವನ್ನು ಉಲ್ಲೇಖಿಸಿದ ಅವರು, ಜ್ಞಾನದ ಅವಶ್ಯಕತೆಯನ್ನು ವಿವರಿಸಿದರು.

ಪ್ರಸ್ತುತ ಸನ್ನಿವೇಶದಲ್ಲಿ ನಮ್ಮೆದುರಿಗೆ ಇರುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ಪದವಿ ಜತೆಗೆ ಇನ್ನೂ ಹೆಚ್ಚಿನ ಜ್ಞಾನ-ಕೌಶಲ್ಯದ ಅಗತ್ಯತೆ ಎಂದು ಪ್ರತಿಪಾದಿಸಿದ ಪ್ರೊ. ಶರ್ಮಾ ಅವರು, ನವ ಪದವೀಧರರು ಇದನ್ನು ಅರಿತು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ.ರಾಮಚಂದ್ರಗೌಡ, ವಿಶ್ವವಿದ್ಯಾಲಯ ನಡೆದು ಬಂದ ದಾರಿ ಹಾಗೂ ಸಾಧನೆಯನ್ನು ಮೆಲುಕು ಹಾಕಿದರು.

ಸರ್ಕಾರವು ವಿಶ್ವವಿದ್ಯಾಲಯಕ್ಕೆ ಹಿರೇಬಾಗೇವಾಡಿಯಲ್ಲಿ 127 ಎಕರೆ ಜಾಗೆ ನೀಡಿರುವುದರಿಂದ ಮುಂಬರುವ ದಿನಗಳಲ್ಲಿ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಕುಲಪತಿ ರಾಮಚಂದ್ರಗೌಡ ಹೇಳಿದರು.

ಕುಲಸಚಿವ ಪ್ರೊ. ಬಸವರಾಜ ಪದ್ಮಶಾಲಿ, ಅತಿಥಿಗಳನ್ನು ಪರಿಚಯಿಸಿದರು. ಕುಲಸಚಿವ ಪ್ರೊ. ಎಸ್.ಎಂ.ಹುರಕಡ್ಲಿ ದಂಡಧಾರಿಯಾಗಿ ಘಟಿಕೋತ್ಸವದ ಮೆರವಣಿಗೆಯ ನೇತೃತ್ವ ವಹಿಸಿದ್ದರು.

ಗೌರವ ಡಾಕ್ಟರೇಟ್ :

ಘಟಿಕೋತ್ಸವ ಸಮಾರಂಭದಲ್ಲಿ ಕ್ರೀಡಾ ಮತ್ತು ಸಮಾಜ ಸೇವೆಯ ಕ್ಷೇತ್ರಕ್ಕಾಗಿ ಗೋವಿಂದರಾಜ್ ಹಾಗೂ ಧಾರ್ಮಿಕ ಮತ್ತು ಸಮಾಜೋ-ಶೈಕ್ಷಣಿಕ ಕ್ಷೇತ್ರಕ್ಕಾಗಿ ಹುಬ್ಬಳ್ಳಿಯ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ರಾಜಯೋಗೀಂದ್ರ ಮಹಾಸ್ವಾಮಿಗಳು ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಘನತೆವೆತ್ತ ರಾಜ್ಯಪಾಲರಾದ ವಜೂಭಾಯ್ ರೂಡಾಭಾಯ್ ವಾಲಾರವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಅಭಿನಂದನೆ ಸಲ್ಲಿಸಿದರು.

33,974 ಜನರಿಗೆ ಪದವಿ :

ಸದರಿ ಘಟಿಕೋತ್ಸವದಲ್ಲಿ ಸ್ನಾತಕ ಪದವಿ ಪಡೆದ 31262 ವಿದ್ಯಾರ್ಥಿಗಲ್ಲಿ 77 ಜನ ವಿದ್ಯಾರ್ಥಿಗಳು ರ್ಯಾಂಕ ಪಡೆದಿದ್ದು, 11 ಜನರಿಗೆ ಘಟಿಕೋತ್ಸವದಲ್ಲಿ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು.

ಸ್ನಾತಕೋತ್ತರ ಪದವಿ ಪಡೆದ 2712 ವಿದ್ಯಾರ್ಥಿಗಳಲ್ಲಿ 68 ವಿದ್ಯಾರ್ಥಿಗಳು ರ್ಯಾಂಕ್ ಪಡೆಸಿದ್ದು, 22 ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪ್ರಮಾಣ ಪತ್ರ ನೀಡಲಾಯಿತು.

ಸ್ನಾತಕ ಹಾಗೂ ಸ್ನಾತಕೋತ್ತರ ತರಗತಿಯ ಒಟ್ಟು 33,974 ವಿದ್ಯಾರ್ಥಿಗಳು ಪದವಿಯನ್ನು ಘನತೆವೆತ್ತ ರಾಜ್ಯಪಾಲರು ಪ್ರಕಟಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತರಾದ ತ್ಯಾಗರಾಜನ್, ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ಆಯುಕ್ತರಾದ ಗೀತಾ ಬಿ.ವಿ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ವಿಶ್ವವಿದ್ಯಾಲಯದ ಸಿಂಡಿಕೇಟ್, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದರು.

Web Title : Rani Channamma University 8th Convocation, at Belagavi

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.