ರೇಷನ್ ಕಾರ್ಡ್ ಇ-ಕೆವೈಸಿ ಹೆಸರಿನಲ್ಲಿ ಬಡವರಿಂದ ಹಣ ವಸೂಲಿ! ತನಿಖೆಗೆ ಆಗ್ರಹ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಇ-ಕೆವೈಸಿ ಮಾಡಿಸಲು ಬರುವ ಬಡವರಿಂದ ಹಣ ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಯೊಂದರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆಯಲು ಇ-ಕೆವೈಸಿ (Ration Card e-KYC) ಮಾಡಿಸಿಕೊಳ್ಳಲು ಬರುತ್ತಿರುವ ಬಡವರಿಂದ ₹50ರಿಂದ ₹100ರವರೆಗೆ ಹಣ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಇ-ಕೆವೈಸಿ ಪ್ರಕ್ರಿಯೆಗಾಗಿ ಅಂಗಡಿಗೆ ಬರುವ ಜನರಿಗೆ ಸೂಕ್ತವಾಗಿ ಸ್ಪಂದಿಸದೆ, ತಾಂತ್ರಿಕ ಸಮಸ್ಯೆಗಳಿವೆ ಎಂದು ಹೇಳಿ ಹಲವು ಬಾರಿ ಅಲೆದಾಡಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಪ್ರತಿದಿನ ನ್ಯಾಯಬೆಲೆ ಅಂಗಡಿಗಳ ಮುಂದೆ ಜನರು ಸಮಸ್ಯೆ ಎದುರಿಸುವಂತಾಗಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ 2000 ದಂಡ ವಿಧಿಸಿದ ಹೈಕೋರ್ಟ್! ವಿಳಂಬ ಧೋರಣೆಗೆ ನ್ಯಾಯಾಲಯ ಅಸಮಾಧಾನ

ದೊಡ್ಡೇರಿ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕನ ವಿರುದ್ಧ ಈ ಆರೋಪ ಮಾಡಲಾಗಿದ್ದು, ಹಣ ನೀಡುವುದನ್ನು ಪ್ರಶ್ನಿಸಿದರೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾರೆ ಎಂದು ಕೆಲವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ: ಇನ್ನೂ 3 ದಿನ ಗುಡುಗು ಸಹಿತ ಮಳೆ, ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್

ಅಧಿಕಾರಿಗಳು ಪರಿಶೀಲನೆಗೆ ಬಂದರೂ ತಮ್ಮ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ರೀತಿಯಲ್ಲಿ ಅಂಗಡಿ ಮಾಲೀಕರು ವರ್ತಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಈ ಆರೋಪಗಳ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (Food Department) ಅಧಿಕಾರಿಗಳು ತಕ್ಷಣ ಪರಿಶೀಲನೆ ನಡೆಸಿ, ತಪ್ಪು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ, ಈ ಬಗ್ಗೆ TV9 ಕನ್ನಡ ವರದಿ ಮಾಡಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories