ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಇನ್ನೊಂದು ಕಾರು ಡಿಕ್ಕಿ: ಮಹಿಳೆ ಸಾವು! ನಾಲ್ವರಿಗೆ ಗಾಯ

ಮಂಡ್ಯದಲ್ಲಿ ಚಲಿಸುತ್ತಿದ್ದ ಕಾರಿಗೆ ವೇಗವಾಗಿ ಬಂದ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯವಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.

ಮಂಡ್ಯ (Mandya): ಬೆಂಗಳೂರು-ಮಂಗಳೂರು (Bengaluru-Mangaluru) ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್ (Tavarekere Gate) ಸಮೀಪದ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮಹಿಳೆಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಮೃತರನ್ನು ಗುಜರಾತ್ ಮೂಲದ ಹಾಗೂ ಬೆಂಗಳೂರಿನಲ್ಲಿ ವಾಸವಾಗಿದ್ದ ಸುಧಾ ಜೈನ್ (58) ಎಂದು ಗುರುತಿಸಲಾಗಿದೆ. ಶ್ರವಣಬೆಳಗೊಳದಿಂದ ಕುಟುಂಬದೊಂದಿಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಪ್ರತ್ಯಕ್ಷ ಮಾಹಿತಿಯ ಪ್ರಕಾರ, ಕುಟುಂಬ ಪ್ರಯಾಣಿಸುತ್ತಿದ್ದ ಸ್ವಿಫ್ಟ್ ಡಿಜೈರ್ ಕಾರನ್ನು ಮತ್ತೊಂದು ಕಾರು ಹಿಂದಿಕ್ಕಲು ಯತ್ನಿಸಿತ್ತು. ಈ ವೇಳೆ ಅತಿವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಜೈರ್‌ನಲ್ಲಿದ್ದ ಸುಧಾ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ವೇಳೆ ರಸ್ತೆ ಬದಿಯಲ್ಲಿ ಕೆಲಸ ಮಾಡುತ್ತಿದ್ದ ಪೆಟ್ರೋಲ್ ಬಂಕ್ ಮಾಲೀಕರಿಗೂ ಗಾಯವಾಗಿದ್ದು, ಅವರ ಕಾಲಿಗೆ ಮುರಿತವಾಗಿದೆ ಎನ್ನಲಾಗಿದೆ. ಗಾಯಗೊಂಡ ನಾಲ್ವರನ್ನು ಬಿ.ಜಿ. ನಗರದ ಆದಿಚುಂಚನಗಿರಿ ಆಸ್ಪತ್ರೆಗೆ (Adichunchanagiri Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆ ಎಷ್ಟಿತ್ತು ಎಂಬುದಕ್ಕೆ ಮತ್ತೊಂದು ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ (Dashcam) ಸೆರೆಯಾಗಿರುವ ದೃಶ್ಯ ಸಾಕ್ಷಿಯಾಗಿದೆ. ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ವೇಗವಾಗಿ ಬಂದು ಮತ್ತೊಂದು ವಾಹನ ಡಿಕ್ಕಿ ಹೊಡೆಯುವ ದೃಶ್ಯ ಇದೀಗ ಗಮನ ಸೆಳೆದಿದೆ.

ಘಟನೆ ಬಳಿಕ ಡಿಕ್ಕಿ ಹೊಡೆದ ಕಾರನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಬೆಳ್ಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎರಡೂ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಮೃತ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ (Bellur Police) ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories