ಬೆಂಗಳೂರು to ಸಾಗರಕ್ಕೆ ಹೊರಟ ಸ್ಲೀಪರ್ ಬಸ್‌ಗೆ ಬೆಂಕಿ: ತಪ್ಪಿದ ಭಾರೀ ಅವಘಡ

Sleeper Bus Catches Fire: ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ಕ್ಲೀನರ್ ಸಮಯಕ್ಕೆ ಸರಿಯಾಗಿ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.

Sleeper Bus Catches Fire: ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಮುಂಬಾಳು ಗ್ರಾಮದಲ್ಲಿ ಬೆಂಗಳೂರಿನಿಂದ ಸಾಗರದತ್ತ (Bengaluru to Sagar) ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ (sleeper bus) ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಗಳೂರು – ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ (NH-206) ಬಸ್ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯಂತೆ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ವೇಗವಾಗಿ ಹರಡಿದ ಪರಿಣಾಮ ಕೆಲವೇ ಸಮಯದಲ್ಲಿ ಬಸ್ ಬಹುತೇಕ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ: ಅ.9ರಂದು ಬೆಂಗಳೂರು, ಮೈಸೂರು, ಮಂಡ್ಯ ಭಾಗದಲ್ಲಿ ಮಿಂಚು, ಗುಡುಗು ಸಹಿತ ಮಳೆ

ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಮತ್ತು ಕ್ಲೀನರ್ ಸಮಯಪ್ರಜ್ಞೆ ಮೆರೆದಿದ್ದಾರೆ. ತಕ್ಷಣವೇ ಬಸ್ ನಿಲ್ಲಿಸಿ ಒಳಗಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

ಮತ್ತೊಂದು ಗಮನಾರ್ಹ ಸಂಗತಿಯೆಂದರೆ, ಹೆಚ್ಚಿನ ಪ್ರಯಾಣಿಕರು ಈಗಾಗಲೇ ಶಿವಮೊಗ್ಗದಲ್ಲೇ ಇಳಿದಿದ್ದರು. ಘಟನೆ ನಡೆದ ಸಂದರ್ಭದಲ್ಲಿ ಸಾಗರದತ್ತ ಪ್ರಯಾಣಿಸುತ್ತಿದ್ದವರು ಕೇವಲ ಇಬ್ಬರು ಪ್ರಯಾಣಿಕರು ಮಾತ್ರ ಎನ್ನಲಾಗಿದೆ. ಸಮಯಕ್ಕೆ ಸರಿಯಾಗಿ ಅವರನ್ನು ಹೊರಗೆ ಕರೆತಂದಿದ್ದರಿಂದ ಎಲ್ಲರೂ ಸುರಕ್ಷಿತವಾಗಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ, ಶೇ.90ರಷ್ಟು ಬೆಳೆ ಹಾನಿ! 2,500 ರೂಪಾಯಿ ಮೊದಲ ಕಂತಿನ ಪರಿಹಾರ ಬಿಡುಗಡೆಗೆ ಕ್ರಮ

ಘಟನೆ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅದಾಗಲೇ ಬಸ್‌ಗೆ ವ್ಯಾಪಕ ಹಾನಿಯಾಗಿತ್ತು.

ಆನಂದಪುರ ಠಾಣೆಯ ಪಿಎಸ್‌ಐ ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories