ರಾಜ್ಯದ್ಯಂತ ಸರ್ಕಾರದ ಗೋಮಾಳ (Government Property) ಅಥವಾ ಸರ್ಕಾರದ ಇತರ ಜಮೀನು (government land) ಗಳಲ್ಲಿ ಹಲವಾರು ವರ್ಷಗಳಿಂದ ಭೂ ರಹಿತ ರೈತರು ಸಾಗುವಳಿ ಮಾಡಿಕೊಂಡು ಬಂದಿದ್ದಾರೆ.
ಇಂಥವರಿಗೆ ಅಕ್ರಮ ಸಕ್ರಮ ಯೋಜನೆಯ ಅಡಿಯಲ್ಲಿ ಹಕ್ಕುಪತ್ರ ವಿತರಣೆ (hakku Patra distribution) ಮಾಡಲು ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ರಾಜ್ಯ ಸರ್ಕಾರ ಹಕ್ಕು ಪತ್ರ ವಿತರಣೆಗೆ ಸಂಬಂಧಪಟ್ಟ ಹಾಗೆ ಮಹತ್ವದ ನಿರ್ಣಯ ಕೈಗೊಂಡಿದೆ ಎನ್ನಲಾಗಿದೆ.
ಗೃಹಲಕ್ಷ್ಮಿ 4ನೇ ಕಂತಿನ ಪೆಂಡಿಂಗ್ ಹಣ ಬಿಡುಗಡೆ! ಇಲ್ಲಿದೆ ಜಿಲ್ಲಾವಾರು ಪಟ್ಟಿ
ಈ ಭಾಗದ ರೈತರಿಗೆ ಹಕ್ಕು ಪತ್ರ ವಿತರಣೆ!
ರಾಜ್ಯದಲ್ಲಿ ಕರಾವಳಿ (coastal area) ಮತ್ತು ಮಲೆನಾಡು (malenadu) ಭಾಗಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಹಕ್ಕು ಪತ್ರ ವಿತರಣೆ ಮಾಡದೆ ಈ ಕೆಲಸ ನೆನೆಗುದಿಗೆ ಬಿದ್ದಿದೆ. ಮಲೆನಾಡು ಹಾಗೂ ಕರಾವಳಿ ವಿಭಾಗದಲ್ಲಿ ಇಲ್ಲಿಯವರೆಗೆ ಸುಮಾರು 13,750 ಅರ್ಜಿಗಳು ಸಲ್ಲಿಕೆ ಆಗಿದ್ದು ಇವುಗಳ ವಿತರಣೆ ಬಗ್ಗೆ ಕ್ರಮ ಕೈಗೊಂಡಿರುವುದರಿಂದ ಮಾಹಿತಿಯನ್ನು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ (forest department minister Ishwar khandre) ತಿಳಿಸಿದ್ದಾರೆ.
ನಿಮ್ಮ ರೇಷನ್ ಕಾರ್ಡ್‌ಗೆ ಅನ್ನಭಾಗ್ಯ ಹಣ ವರ್ಗಾವಣೆ ಆಗಿದ್ಯಾ? ಚೆಕ್ ಮಾಡಿಕೊಳ್ಳಿ
ಒಟ್ಟು 31,864 ಎಕರೆ ಭೂಮಿಗೆ ಹಕ್ಕು ಪತ್ರ ನೀಡಲು ಅರ್ಜಿ ಸಲ್ಲಿಕೆ ಆಗಿತ್ತು. ಈ ಪೈಕಿ ಏಳು ಸಾವಿರ ಹಕ್ಕು ಪತ್ರ ವಿತರಣೆಗೆ ಸರ್ಕಾರ ಮುಂದಾಗಿದೆ. ಈಗಾಗಲೇ ಸರ್ಕಾರಿ ಭೂಮಿ ಕೊರತೆ ಉಂಟಾಗಿದ್ದು, 3 ಎಕರೆಗಿಂತ ಹೆಚ್ಚಿಗೆ ಭೂಮಿಗೆ ಹಕ್ಕು ಪತ್ರ ವಿತರಣೆ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.
ಉಚಿತ ಮನೆ ಹಂಚಿಕೆಗೆ ಅರ್ಜಿ ಆಹ್ವಾನ! ವಸತಿ ಯೋಜನೆಯಲ್ಲಿ ಸ್ವಂತ ಮನೆ ಮಾಡಿಕೊಳ್ಳಿ
ಯಾರಿಗೆ ಸಿಗಲಿದೆ ಹಕ್ಕು ಪತ್ರ?
ಅರಣ್ಯ ಸಂರಕ್ಷಣಾ ಕಾಯ್ದೆ (forest conservation act) 1980ಕ್ಕೂ ಮೊದಲು ಅರಣ್ಯ ಭಾಗದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಮಾತ್ರ ಹಕ್ಕು ಪತ್ರ ವಿತರಣೆ ಮಾಡಲಾಗುವುದು. ಹಕ್ಕು ಪತ್ರ ವಿತರಣೆ ಪ್ರಕ್ರಿಯೆ ಆರಂಭವಾಗಿದ್ದು ಜನವರಿ ತಿಂಗಳ ಅಂತ್ಯದ ಒಳಗೆ ಸುಮಾರು ಏಳು ಸಾವಿರ ಅರ್ಜಿಗಳ ವಿಲೇವಾರಿ ನಡೆಯಲಿದೆ.
State government decision to issue Hakku Patra to landless farmers
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.