ಚಿತ್ರದುರ್ಗ: ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದ ಯುವಕ, ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ಶನಿವಾರ ನಡೆದಿದೆ
ಚಿತ್ರದುರ್ಗ (Chitradurga): ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ಶನಿವಾರ ನಡೆದಿದೆ. ವಿವರ.. ಯುವತಿ ಪ್ರೇಮಾ (18) ಚಿತ್ರದುರ್ಗದ ಚಿತ್ರಾ ಡಾನ್ ಬಾಸ್ಕೋ ಕಾಲೇಜಿನಲ್ಲಿ (College) ಬಿಎಸ್ಸಿ ಓದುತ್ತಿದ್ದಳು.
ತರುಣ್ ಎಂಬ ಯುವಕ ಆಕೆಯನ್ನು ಹಿಂಬಾಲಿಸಿ ಪ್ರೀತ್ಸು ಅಂತ ಕಿರುಕುಳ ನೀಡುತ್ತಿದ್ದ. ಅಲ್ಲದೆ ಫೋಟೋಗಳನ್ನು ಮಾರ್ಫಿಂಗ್ ಮಾಡಿ ಬೆದರಿಕೆ ಹಾಕಿದ್ದಾನೆ.
ವಿದ್ಯಾರ್ಥಿಗಳಿಗೆ ಬಿಯರ್ ಕುಡಿಸಿ ಡ್ಯಾನ್ಸ್ ಮಾಡಿಸಿದ ಕೀಚಕ ಶಿಕ್ಷಕರ ಅಮಾನತು
ಇದರಿಂದ ಜಿಗುಪ್ಸೆಗೊಂಡ ಪ್ರೇಮಾ ಕಾಲೇಜು ಕಟ್ಟಡದಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದರೂ ಆಕೆ ಮೃತಪಟ್ಟಿದ್ದಾಳೆ. ಚಿತ್ರದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಗೆ ಕಾರಣವಾದ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬಾಲಕಿಯ ತಂದೆ ಸುಧಾಕರ್ ಆಗ್ರಹಿಸಿದ್ದಾರೆ.
Student commits suicide by jumping from college building in Chitradurga