Chitradurga: ಗೀಸರ್ ಸೋರಿಕೆ, ಉಸಿರುಗಟ್ಟಿ ಚಿತ್ರದುರ್ಗ ಬಿಎಸ್ಸಿ ವಿದ್ಯಾರ್ಥಿನಿ ಸಾವು
ಚಿತ್ರದುರ್ಗದಲ್ಲಿ ಮನೆ ಒಳಗೆ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

- ಗೀಸರ್ ಸೋರಿಕೆ ದುರಂತ
- ಬಿಎಸ್ಸಿ ವಿದ್ಯಾರ್ಥಿನಿ ಸಾವು
- ಚಿತ್ರದುರ್ಗದಲ್ಲಿ ಪ್ರಕರಣ
ಚಿತ್ರದುರ್ಗ (Chitradurga): ಚಿತ್ರದುರ್ಗ ನಗರದ ವಿನಾಯಕ ಕಲ್ಯಾಣ ಮಂಟಪದ ಸಮೀಪದ ನಿವಾಸದಲ್ಲಿ ಸಂಭವಿಸಿದ ದುರಂತದಲ್ಲಿ ಯುವತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರನ್ನು ನೂತನ (20) ಎಂದು ಗುರುತಿಸಲಾಗಿದ್ದು, ಅವರು ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು.
ಮನೆ ಒಳಗೆ ಗೀಸರ್ನಿಂದ ಅನಿಲ ಸೋರಿಕೆಯಾಗಿ (Geyser Gas Leak) ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಸ್ವಸ್ಥಗೊಂಡ ಯುವತಿಯನ್ನು ಆಸ್ಪತ್ರೆಗೆ ಸಾಗಿಸಲಾದರೂ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ಅನಾರೋಗ್ಯದಿಂದ ಮನನೊಂದು ಕೋಲಾರ ಆಟೋ ಚಾಲಕ ಆತ್ಮಹತ್ಯೆ
ಮೃತದೇಹವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿದ ಸಂಬಂಧಿಕರು, ಮೃತದೇಹವನ್ನು ಬೈಕ್ನಲ್ಲೇ ತೆಗೆದುಕೊಂಡು ಹೋಗಿರುವ ಘಟನೆ ಸ್ಥಳದಲ್ಲಿ ಗೊಂದಲಕ್ಕೆ ಕಾರಣವಾಯಿತು. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TRENDING ARTICLES1 / 3






