ಕಬ್ಬು ಬೆಳೆಗಾರರ ಹೋರಾಟಕ್ಕೆ ಇಂದು ತಾತ್ಕಾಲಿಕ ತೆರೆ ಸಾಧ್ಯತೆ; ಮಹತ್ವದ ನಿರ್ಧಾರ ಪ್ರಕಟ ನಿರೀಕ್ಷೆ

Sugarcane Farmers: ಕಬ್ಬು ಬೆಲೆ ಏರಿಕೆ ಮತ್ತು ಎಫ್‌ಆರ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟದ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗಿನ ಸಭೆ ಬಳಿಕ ಸೋಮವಾರ ಮಹತ್ವದ ನಿರ್ಧಾರ ಪ್ರಕಟವಾಗುವ ನಿರೀಕ್ಷೆಯಿದೆ.

Sugarcane Farmers: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ಸೋಮವಾರ ತಾತ್ಕಾಲಿಕ ವಿರಾಮ ಬೀಳುವ ಸಾಧ್ಯತೆಯಿದೆ. ರೈತ ಮುಖಂಡರು ಇಂದು ಬೆಳಗ್ಗೆ 11 ಗಂಟೆಗೆ ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ.

ರವಿವಾರ ತಡರಾತ್ರಿ ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ರೈತ ಮುಖಂಡರ ನಡುವೆ ಸುದೀರ್ಘ ಸಭೆ ನಡೆಯಿತು. ಸುಮಾರು ಎರಡೂವರೆ ಗಂಟೆಗಳ ಕಾಲ ಚರ್ಚೆ ನಡೆದರೂ, ರೈತರ ಬೇಡಿಕೆಗಳ ಕುರಿತು ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಕರ್ನಾಟಕದಲ್ಲಿ 7 ದಿನ ಭಾರೀ ಗಾಳಿ, ಜಡಿ ಮಳೆ; ಬೆಂಗಳೂರು, ಕೋಲಾರ, ಮೈಸೂರು, ಶಿವಮೊಗ್ಗಕ್ಕೆ ಮುನ್ಸೂಚನೆ

ಕೇಂದ್ರ ಸರ್ಕಾರ ಈಗಾಗಲೇ ರಚಿಸಿರುವ ಸಮಿತಿಯ ವರದಿಗೆ ಕಾಯುವಂತೆ ರೈತ ಮುಖಂಡರಲ್ಲಿ ಸಚಿವರು ಮನವಿ ಮಾಡಿದ್ದಾರೆ. ಸಮಿತಿಯು ಶೀಘ್ರದಲ್ಲೇ ಸಭೆ ಸೇರಿ ರೈತರ ಬೇಡಿಕೆಗಳನ್ನು ಪರಿಶೀಲಿಸಲಿದೆ. ವರದಿ ಸಿದ್ಧಪಡಿಸಲು ಸ್ವಲ್ಪ ಕಾಲಾವಕಾಶ ಬೇಕಿರುವುದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯುವಂತೆ ಕೋರಲಾಗಿದೆ ಎಂದು ಪ್ರಹ್ಲಾದ ಜೋಶಿ ತಿಳಿಸಿದರು.

sugarcane Farmers Protest

ಸಭೆಯಲ್ಲಿ ಸಕಾರಾತ್ಮಕ ಚರ್ಚೆ ನಡೆದಿದ್ದು, ಬೇಡಿಕೆಗಳನ್ನು ಈಡೇರಿಸುವ ಭರವಸೆ ದೊರೆತಿದೆ ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಹೇಳಿದ್ದಾರೆ. ಆದರೆ, ಬೇಡಿಕೆಗಳನ್ನು ಈಡೇರಿಸಲು ಯಾವುದೇ ನಿರ್ದಿಷ್ಟ ಗಡುವು ನೀಡಿಲ್ಲ. ಎರಡು ದಿನಗಳಲ್ಲಿ ಸಮಿತಿಯು ಬೆಳಗಾವಿಯಲ್ಲಿ ಸಭೆ ಸೇರಲಿದೆ ಎಂಬ ಮಾಹಿತಿಯನ್ನೂ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಗ್ ನ್ಯೂಸ್, ರೇಷನ್ ಕಾರ್ಡ್ ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 10ರವರೆಗೆ ಅವಕಾಶ

ಅಕ್ಟೋಬರ್ 13ರಂದು ಬೆಳಗಾವಿಯ ಹತ್ತರಗಿ ಟೋಲ್ ನಾಕಾದಿಂದ ಆರಂಭವಾದ ರೈತರ ಪಾದಯಾತ್ರೆ ಐದನೇ ದಿನವಾದ ರವಿವಾರ ಧಾರವಾಡ ತಲುಪಿತ್ತು. ಬಳಿಕ ಜಿಲ್ಲಾಧಿಕಾರಿಗಳ ಮಾತುಕತೆಯ ನಂತರ ರೈತ ಮುಖಂಡರನ್ನು ಹುಬ್ಬಳ್ಳಿಗೆ ಕರೆತರಲಾಗಿತ್ತು.

ರೈತರ ಹೋರಾಟಕ್ಕೆ ಸೂಕ್ತ ಪರಿಹಾರ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಅಭಿಪ್ರಾಯಪಟ್ಟಿದ್ದಾರೆ. ಆದರೆ, ಬೇಡಿಕೆಗಳು ಈಡೇರದಿದ್ದರೆ ಹೋರಾಟ ಮುಂದುವರಿಯಲಿದೆ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ಸೋಮವಾರದ ನಿರ್ಧಾರದ ಮೇಲೆ ಎಲ್ಲರ ಗಮನ ನೆಟ್ಟಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories