ನಿಂತಿದ್ದ ಕ್ಯಾಂಟರ್‌ಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಇಬ್ಬರು ಸಾವು
ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಹೊಸ ವರ್ಷದ ಪಾರ್ಟಿ ಮುಗಿಸಿ ಹಿಂತಿರುವಾಗ ನಿಂತಿದ್ದ ಕ್ಯಾಂಟರ್‌ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ನಿರಂಜನ್ (41) ಮತ್ತು ವಿಶ್ವನಾಥ್ (43) ಎಂದು ಗುರುತಿಸಲಾಗಿದೆ.
ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದಾಗ ಕ್ಯಾಂಟರ್‌ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Swift car crashes into a parked canter Truck, resulting in two deaths