ಮೈಸೂರು ಜಿಲ್ಲೆಯಲ್ಲೊಂದು ಕೋಳಿಯೇ ಇಲ್ಲದ ಊರು

ಕೋಳಿಯೇ ಇಲ್ಲದ ಊರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಭೇರ್ಯ-ಸಾಲಿಗ್ರಾಮ ಮುಖ್ಯ ರಸ್ತೆಯ ಬಾಚಹಳ್ಳಿ ಗ್ರಾಮದಿಂದ 2ಕಿಮೀ ಅಂತರದಲ್ಲಿ ಸಂಕನಹಳ್ಳಿ ಎಂಬ ಗ್ರಾಮವಿದೆ. ಇಲ್ಲಿನ ವಿಶೇಷತೆ ಏನೆಂದರೆ ಇಲ್ಲಿ ಕೋಳಿಗಳೇ ಇಲ್ಲ ಎನ್ನುವುದಾಗಿದೆ.

🌐 Kannada News :

ಮೈಸೂರು ಜಿಲ್ಲೆಯಲ್ಲೊಂದು ಕೋಳಿಯೇ ಇಲ್ಲದ ಊರು

(Kannada News) : ಕೋಳಿ ಇಲ್ಲದ ಊರು : ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಭೇರ್ಯ-ಸಾಲಿಗ್ರಾಮ ಮುಖ್ಯ ರಸ್ತೆಯ ಬಾಚಹಳ್ಳಿ ಗ್ರಾಮದಿಂದ 2ಕಿಮೀ ಅಂತರದಲ್ಲಿ ಸಂಕನಹಳ್ಳಿ ಎಂಬ ಗ್ರಾಮವಿದೆ. ಇಲ್ಲಿನ ವಿಶೇಷತೆ ಏನೆಂದರೆ ಇಲ್ಲಿ ಕೋಳಿಗಳೇ ಇಲ್ಲ ಎನ್ನುವುದಾಗಿದೆ.

ಪ್ರತಿ ಊರುಗಳಲ್ಲಿಯೂ ಒಂದೊಂದು ರೀತಿಯ ವಿಶೇಷತೆಗಳಿರುತ್ತವೆ. ಕೆಲವೊಂದು ಆ ಊರಿಗಷ್ಟೆ ಸೀಮಿತವಾಗಿರುತ್ತವೆಯಲ್ಲದೆ, ಅಲ್ಲಿನ ಆಚರಣೆಗಳನ್ನು ಜನ ತಪ್ಪದೆ ಪಾಲನೆ ಮಾಡುತ್ತಾ ಬರುತ್ತಿರುತ್ತಾರೆ. ಅದರಂತೆ ಸಂಕನಹಳ್ಳಿಗೂ ಕೋಳಿಗೂ ಹಾಗು ಬರುತ್ತಿಲ್ಲವಂತೆ.

ಗ್ರಾಮದ ಬಗ್ಗೆ ಹೇಳಬೇಕೆಂದರೆ ಇಲ್ಲಿನ ಜನ ವ್ಯವಸಾಯ ಮಾಡುತ್ತಿದ್ದು, ತರಕಾರಿ, ಭತ್ತ, ರಾಗಿ, ಹೊಗೆಸೊಪ್ಪು ಬೆಳೆಯುತ್ತಾರೆ. ಜತೆಗೆ ಹಸು, ಎಮ್ಮೆ, ಕುರಿ, ಮೇಕೆಗಳನ್ನು ಸಾಕುತ್ತಾರೆ.

ಸಂಕನಹಳ್ಳಿ ಗ್ರಾಮದ ಬಗ್ಗೆ ಹೇಳುವುದಾದರೆ ಇಲ್ಲಿನ ಬಸವೇಶ್ವರ ದೇಗುಲದಲ್ಲಿರುವ ನಂದಿಯು ಪರಶಿವನಿಂದ ಅನುಗ್ರಹ ಪಡೆದು ನೆಲೆಸಿದೆ ಎಂಬ ನಂಬಿಕೆ ಗ್ರಾಮಸ್ಥರದ್ದಾಗಿದೆ.

ಈ ದೇಗುಲದಲ್ಲಿರುವ ಬಸವೇಶ್ವರನಿಗೆ ಪ್ರತಿದಿನವೂ ತಪ್ಪದೆ ಪೂಜೆ ನಡೆಯುತ್ತಿದೆಯಲ್ಲದೆ, ಗ್ರಾಮದ ಜನರಿಗೆ ಬಸವೇಶ್ವರ ಆರಾಧ್ಯ ದೈವನಾಗಿದ್ದಾನೆ.

ಇಷ್ಟೇ ಅಲ್ಲದೆ, ಗ್ರಾಮದ ಒಳಿತಿಗಾಗಿ ಗ್ರಾಮಸ್ಥರು ಒಟ್ಟಾಗಿ ಸೇರಿ ಪ್ರತಿ ವರ್ಷವೂ ಬಂಡಿ ಹಬ್ಬವನ್ನು ಆಚರಿಸುತ್ತಾ ಬರಲಾಗುತ್ತಿದ್ದು, ಈ ವೇಳೆ ಪಕ್ಕದ ಗ್ರಾಮವಾದ ಮೇಲೂರಿನಿಂದ ಶ್ರೀಶಂಭುಲಿಂಗೇಶ್ವರ ದೇವರನ್ನು ತಂದು ತಮ್ಮ ಊರಿನ ಮಧ್ಯಭಾಗದಲ್ಲಿರುವ ಕುರ್ಜಿನಲ್ಲಿ ಪ್ರತಿಷ್ಠಾಪಿಸಿ ಭಕ್ತಿಭಾವಗಳಿಂದ ಪೂಜಿಸುವುದು ಇಲ್ಲಿನ ಸಂಪ್ರದಾಯವಾಗಿದೆ.

ಗ್ರಾಮದಲ್ಲಿ ಯಾರಾದರೂ ಮಾಂಸ ಅಡುಗೆ ಮಾಡಿ ಸೇವಿಸಿದರೆ ತೊಂದರೆಯಾಗುವುದಾಗಿ ಇಲ್ಲಿನವರು ಹೇಳುತ್ತಾರೆ. ಇದಕ್ಕೆ ಹಿಂದೆ ನಡೆದ ಘಟನೆಯೊಂದನ್ನು ಕೂಡ ನಿದರ್ಶನವಾಗಿ ನೀಡುತ್ತಾರೆ.

ಅದೇನೆಂದರೆ ಬಹಳಷ್ಟು ವರ್ಷಗಳ ಹಿಂದೆ ಗೊಂಬೆ ನಾಟಕ ವಾಡಿಸಲು ಬಂದಂತಹ ಕಲಾವಿದರು ಮಾಂಸ ಹಾರಿಗಳಾಗಿದ್ದು, ಊರಿನಿಂದ ಹೊರಗೆ ಅಡುಗೆ ಮಾಡಿಕೊಂಡು ಊಟ ಮಾಡಿ ನಂತರ ಗ್ರಾಮಕ್ಕೆ ಪ್ರವೇಶ ಮಾಡಿ ಗೊಂಬೆ ಆಡಿಸುತ್ತಿದ್ದರಂತೆ.

ಒಮ್ಮೆ ಗ್ರಾಮದ ಜನಕ್ಕೆ ತಿಳಿಯದ ರೀತಿಯಲ್ಲಿ ಅವರು ಕದ್ದುಮುಚ್ಚಿ ಗ್ರಾಮದೊಳಗೆ ಮಾಂಸದ ಅಡುಗೆ ಮಾಡಿ ಊಟ ಮಾಡಿದ್ದರಂತೆ. ಆದರೆ ಆ ರಾತ್ರಿ ಕಳೆದು ಬೆಳಗಿನ ಹೊತ್ತಿಗೆ ಗೊಂಬೆ ಆಟ ಆಡಿಸುವವರ ಬಳಿಯಿದ್ದ ಮೂರು ಕುದುರೆಗಳು ಸಾವನ್ನಪ್ಪಿದ್ದವಂತೆ.

ಇದೊಂದು ಕತೆಯಾಗಿ ಗ್ರಾಮದಲ್ಲಿ ಪ್ರಚಲಿತದಲ್ಲಿರುವುದರಿಂದ ಗ್ರಾಮದ ಒಳಿತಿಗಾಗಿ ಜನ ಹಿಂದಿನ ಸಂಪ್ರದಾಯವನ್ನು ಬಯಸುತ್ತಿದ್ದಾರೆ. ಅದರಂತೆ ಕೋಳಿಗಳೆ ಇಲ್ಲದ ಊರು ಎಂಬ ವಿಶೇಷತೆಗೆ ಕಾರಣವಾಗಿದೆ.

Web Title : There is no a single Hen in the district of Mysore

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.