ಗೃಹಲಕ್ಷ್ಮಿ ಯೋಜನೆ ಹಣ ಬರದೇ ಇರುವುದಕ್ಕೆ ಇದು ಕೂಡ ಕಾರಣ ಇರಬಹುದು! ಇಂದೇ ಸರಿಪಡಿಸಿಕೊಳ್ಳಿ
ಗೃಹಲಕ್ಷ್ಮಿ ಯೋಜನೆಗೆ (Gruha Lakshmi Scheme) ಈಗಾಗಲೇ ಚಾಲನೆ ಸಿಕ್ಕಿದೆ. ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜೆನೆಗೆ ಮೈಸೂರಿನಲ್ಲಿ (Mysore) ಬೃಹತ್ ಕಾರ್ಯಕ್ರಮದ ಮೂಲಕ ದೊಡ್ಡ ಮಟ್ಟದಲ್ಲಿ ಈ ಯೋಜನೆ ಚಾಲನೆ ಸಿಕ್ಕಿದೆ.
ಹಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಬ್ಯಾಂಕ್ ಖಾತೆಗೆ ತಲುಪಿದೆ. ಆದರೆ ಇನ್ನೂ ಕೆಲವು ಮಹಿಳೆಯರು ಈ ಯೋಜನೆಯ ಹಣ ಪಡೆದಿಲ್ಲ. ಅದಕ್ಕೆ ಕಾರಣ ರೇಷನ್ ಕಾರ್ಡ್ ಅಪ್ಡೇಟ್ (Ration card update) ಆಗದೆ ಇರುವುದು ಆಗಿರಬಹುದು ಎಂದು ಕೂಡ ಹೇಳಲಾಗುತ್ತಿದೆ.
ಹಾಗೆಯೇ ಅನ್ನಭಾಗ್ಯ ಯೋಜನೆಯ (Annabhagya Scheme) ಸೌಲಭ್ಯ ಪಡೆಯುವುದಕ್ಕೂ ರೇಷನ್ ಕಾರ್ಡ್ ಅಪ್ಡೇಟ್ ಆಗಿರಬೇಕು.
ಗೃಹಲಕ್ಷ್ಮಿ ಯೋಜನೆಗೆ ಇನ್ನು ಅರ್ಜಿ ಹಾಕಿಲ್ಲದವರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ! ಎಲ್ಲರಿಗೂ ಸಿಗಲಿದೆ ಯೋಜನೆಯ ಫಲ
ಹಾಗಾಗಿ ನೀವು ಕೂಡ ರೇಷನ್ ಕಾರ್ಡ್ (Ration Card) ಅಪ್ಡೇಟ್ ಮಾಡಿಸಿಕೊಂಡು ಈ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳಬಹುದು. ನಮ್ಮ ರಾಜ್ಯದ ಆಹಾರ ಮತ್ತು ನಾಗರೀಕ ಸಚಿವಾಲಯವು ರೇಷನ್ ಕಾರ್ಡ್ ತಿದ್ದುಪಡಿ (Ration Card Correction), ಅಂದರೆ ಹೊಸ ಸದಸ್ಯರ ಹೆಸರು ಸೇರಿಸುವುದು, ಹಳೆಯ ಹೆಸರುಗಳಲ್ಲಿ ಬದಲಾವಣೆ ಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವ ತಿದ್ದುಪಡಿ ಪ್ರಕ್ರಿಯೆಯನ್ನು ಸಧ್ಯಕ್ಕೆ ನಿಲ್ಲಿಸಿತ್ತು.
ಆದರೆ ಸೆಪ್ಟೆಂಬರ್ ತಿಂಗಳಿನಿಂದ ಈ ಯೋಜನೆಗೆ ಮತ್ತೆ ಚಾಲನೆ ಸಿಕ್ಕಿದೆ. ಈ ವಿಚಾರದ ಬಗ್ಗೆ ಪೂರ್ತಿ ಡೀಟೇಲ್ಸ್ ತಿಳಿಸಿಕೊಡುತ್ತೇವೆ ನೋಡಿ..
ಪ್ರಸ್ತುತ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಎಂದುಕೊಂಡಿದ್ದರೆ ಕರ್ನಾಟಕ ಒನ್ (Karnataka One), ಬೆಂಗಳೂರು ಒನ್ (Bangalore One), ಬಾಪೂಜಿ ಸೇವಾ ಕೇಂದ್ರ ಇಲ್ಲಿ ಹೋಗಿ ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಬಹುದು.
ನಿಮ್ಮ ರೇಷನ್ ಕಾರ್ಡ್ ನಲ್ಲಿ ಮನೆಯ ಮುಖ್ಯಸ್ಥರ ಸ್ಥಾನದಲ್ಲಿ ಮನೆಯ ಪುರುಷರ ಹೆಸರು ಇದ್ದರೆ ಅಂಥವರಿಗೂ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಸೌಲಭ್ಯ ಸಿಗುವ ಹಾಗೆ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಮಾಹಿತಿ ಸಿಕ್ಕಿದೆ. ನಮಗೆಲ್ಲ ಗೊತ್ತಿರುವ ಹಾಗೆ ಸರ್ಕಾರವು ಈಗಾಗಲೇ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದೆ.
ಇನ್ಮುಂದೆ ಸಿಗೋದಿಲ್ಲ ಬಿಪಿಎಲ್ ರೇಷನ್ ಕಾರ್ಡ್! ರಾಜ್ಯ ಸರ್ಕಾರದಿಂದ ರಾತ್ರೋ ರಾತ್ರಿ ಬಿಗ್ ಅಪ್ಡೇಟ್
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹೇಳುವುದಾದರೆ ರಾಜ್ಯದಲ್ಲಿ ಈಗ ಸುಮಾರು 1.19 ಕೋಟಿ ಮಹಿಳಾ ಮಣಿಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಇನ್ನು ಕೆಲವು ಮಹಿಳೆಯರು ಅರ್ಜಿ ಸಲ್ಲಿಸಬೇಕಿದೆ.
ಅಂಥ ಮಹಿಳೆಯರು ಈಗಲೂ ಕೂಡ ಅರ್ಜಿ ಸಲ್ಲಿಸಬಹುದು. ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಲಾಸ್ಟ್ ಡೇಟ್ ಇನ್ನು ನಿಗದಿಯಾಗಿಲ್ಲ. ಈ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ರಾಹುಲ್ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು ಸೇರಿದಂತೆ ಸಾಕಷ್ಟು ಗಣ್ಯರು ಬಂದಿದ್ದರು.
ಗೃಹಲಕ್ಷ್ಮಿ ಯೋಜನೆಯ ₹2000 ಇನ್ನು ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ, ಹಣ ಬರುತ್ತೋ ಇಲ್ಲವೋ ಗೊತ್ತಾಗುತ್ತೆ
ಗೃಹಲಕ್ಷ್ಮಿ ಯೋಜನೆಯ ಹಣ ಈಗಾಗಲೇ ಸಾಕಷ್ಟು ಜನರಿಗೆ ಸಿಕ್ಕಿದ್ದು, ಒಂದು ವೇಳೆ ಹಣ ಇನ್ನು ಕ್ರೆಡಿಟ್ ಆಗದೆ ಇದ್ದರೆ ಅದಕ್ಕೆ ಕಾರಣ ರೇಷನ್ ಕಾರ್ಡ್ ಅಪ್ಡೇಟ್ ಆಗದೆ ಇರುವ ಸಮಸ್ಯೆ ಕೂಡ ಆಗಿರುತ್ತದೆ. ಹಾಗಾಗಿ ಮೊದಲಿಗೆ ನೀವು ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿದರೆ, ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಈ ಎರಡು ಯೋಜನೆಗಳ ಸೌಲಭ್ಯವನ್ನು ಸುಲಭವಾಗಿ ಪಡೆಯಬಹುದು.
This may also be the reason why Gruha Lakshmi Yojana Money Not Credited To Bank Account