ಕೋಲಾರದಲ್ಲಿ ಭೀಕರ ಅಪಘಾತ.. ತಂದೆ-ತಾಯಿ, ಮಗಳು ಸ್ಥಳದಲ್ಲೇ ಸಾವು

Kolar Road Accident: ಕೋಲಾರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Kolar Road Accident: ಕೋಲಾರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಜೀವ ಕಳೆದುಕೊಂಡಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ತಂದೆ, ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ದುರ್ಘಟನೆ ಮುಳಬಾಗಿಲು ತಾಲೂಕಿನ ವಿ. ಗುಟ್ಟಹಳ್ಳಿ ಸಮೀಪ ಸಂಭವಿಸಿದೆ. ಮೃತರನ್ನು ಎನ್. ಚಮಕಲಹಳ್ಳಿ ಗ್ರಾಮದ ನಿವಾಸಿಗಳಾದ ಅಬೂಬಕರ್ (38), ಅವರ ಪತ್ನಿ ಸಾಬೀರಾ (37) ಹಾಗೂ ಪುತ್ರಿ ಜೋಯಾ (16) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಮೂವರು ಕಲ್ಲಿನ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories