ಟೈರ್ ಸ್ಫೋಟ, ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿ: ಮೂವರು ಸಾವು
ಗೋವಾಕ್ಕೆ ಹೊರಟಿದ್ದವರು ಟೈರ್ ಸ್ಫೋಟದಿಂದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತಕ್ಕೆ ಒಳಗಾಗಿದ್ದು, ಮೂವರು ಮೃತಪಟ್ಟಿದ್ದು ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Publisher: Kannada News Today (Digital Media)
- ಟೈರ್ ಸ್ಫೋಟ, ಕಾರು ಅಪಘಾತ
- ಮೂವರು ಸ್ಥಳದಲ್ಲೇ ಸಾವು
- ಗಾಯಗೊಂಡ ಐವರಿಗೆ ಚಿಕಿತ್ಸೆ
ಗೋವಾಕ್ಕೆ ಪ್ರವಾಸಕ್ಕೆ (Goa Trip) ತೆರಳುತ್ತಿದ್ದ ಸಂದರ್ಭದಲ್ಲಿ ಕಾರು ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಮೂವರು ಯುವಕರು ಸಾವಿಗೀಡಾದ ದುರ್ಘಟನೆ ಚಿತ್ರದುರ್ಗ ತಾಲ್ಲೂಕಿನ ಕಾತ್ರಾಳ್ ಗ್ರಾಮದ ಬಳಿ ಸಂಭವಿಸಿದೆ.
ಅಪಘಾತದ ರಭಸದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ಐವರು ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಸೇರಿದ್ದಾರೆ.
ಮೃತರನ್ನು ತಮಿಳುನಾಡಿನ ಅರ್ಜುನ್ (28), ಶರವಣ (31), ಸೇಂದಿಲ್ (29) ಎಂದು ಗುರುತಿಸಲಾಗಿದೆ. ಚನ್ನೈನಿಂದ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಅರ್ಜುನ್ ಎಂಬವರು ಚನ್ನೈ ಪೊಲೀಸ್ (Chennai Police) ಆಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತಕ್ಕೆ ಅತಿಯಾದ ವೇಗ ಹಾಗೂ ಅಜಾಗರೂಕತೆ ಕಾರಣವೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ. ಕಾರಿನ (Car Accident) ಟೈರ್ ಸ್ಫೋಟ (tyre burst) ಆದುದೇ ಪ್ರಾಥಮಿಕ ಕಾರಣವೆಂದು ಶಂಕಿಸಲಾಗಿದೆ.
ಅಪಘಾತ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಸಹಾಯಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Three Killed in Chitradurga Innova Crash