ಕಾಲುವೆಗೆ ಉರುಳಿ ಬಿದ್ದ ಟ್ರ್ಯಾಕ್ಟರ್: ಮಹಿಳೆ ಧಾರುಣ ಸಾವು

ಮಸ್ಕಿ ತಾಲೂಕಿನ ಹಾಲಾಪುರ ಬಳಿ ಟ್ರ್ಯಾಕ್ಟರ್ ಕಾಲುವೆಗೆ ಉರುಳಿದ ಘಟನೆ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ.

  • ಟ್ರ್ಯಾಕ್ಟರ್ ಕಾಲುವೆಗೆ ಬಿದ್ದು ಭೀಕರ ದುರಂತ
  • ಅಂಬಮ್ಮ (46) ಸ್ಥಳದಲ್ಲೇ ಸಾವು
  • ಆರು ಮಂದಿ ಕಾರ್ಮಿಕರಿಗೆ ಗಂಭೀರ ಗಾಯ

ರಾಯಚೂರು (Raichur) ಜಿಲ್ಲೆಯ ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿ ಗುರುವಾರ ಸಂಜೆ ಸಂಭವಿಸಿದ ದುರಂತದ ಘಟನೆ ಗ್ರಾಮಸ್ಥರಲ್ಲಿ ಶೋಕ ಮೂಡಿಸಿದೆ. ದಿನದ ಕೆಲಸ ಮುಗಿಸಿ ಟ್ರ್ಯಾಕ್ಟರ್‌ನಲ್ಲಿ (Tractor) ಮನೆಗೆ ಹಿಂದಿರುಗುತ್ತಿದ್ದ ವೇಳೆ ವಾಹನವು ನಿಯಂತ್ರಣ ತಪ್ಪಿ ತುಂಗಭದ್ರಾ ಕಾಲುವೆಗೆ ಉರುಳಿ ಬಿದ್ದಿದೆ.

ಘಟನೆಯಲ್ಲಿ ಅಂಬಮ್ಮ (46) ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಆರು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತನ್ನ ನಿರ್ಲಕ್ಷ್ಯದಿಂದಾಗಿ ಈ ಭೀಕರ ಅಪಘಾತ ಸಂಭವಿಸಿದೆ ಎಂಬ ಆರೋಪದ ಮೇಲೆ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿನನಿತ್ಯ ಸುಮಾರು 15-20 ಮಂದಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಈ ಟ್ರ್ಯಾಕ್ಟರ್ ನಿದಾನವಾಗಿ ಮರಳಿ ಬರುತ್ತಿದ್ದಾಗ, ಹಠಾತ್ ಚಾಲಕನ ನಿಯಂತ್ರಣ ತಪ್ಪಿದೆ.

ಸ್ಥಳಕ್ಕೆ ಭೇಟಿ ನೀಡಿದ ಎಸ್‌ಐ ವೆಂಕಟೇಶ್ ನಾಯಕ್ ನೇತೃತ್ವದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭವಾಗಿದೆ. ಗ್ರಾಮಸ್ಥರು ಕೂಡಾ ಘಟನೆಯ ದೃಶ್ಯ ಕಂಡು ಭೀತಿಗೊಳಗಾದರು.

Tractor Falls into Canal, One Dead in Raichur

Related Stories