ಹಾಸ್ಟೆಲ್ ಶೌಚಾಲಯದಲ್ಲೇ 8ನೇ ತರಗತಿ ವಿದ್ಯಾರ್ಥಿನಿ ಸಾವು! ಅಷ್ಟಕ್ಕೂ ಏನಾಯ್ತು?

ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಶೌಚಾಲಯಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿನಿ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

  • ಲೋ ಬಿಪಿ, ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಸಾವು
  • 8ನೇ ತರಗತಿ ಬಾಲಕಿ ಪ್ರಿಯಾಂಕಾ ಮೃತ ವಿದ್ಯಾರ್ಥಿನಿ
  • ಶೌಚಾಲಯದಲ್ಲಿ ಅಸ್ವಸ್ಥಗೊಂಡು ಬಾಲಕಿ ಅಸ್ವಸ್ಥ

ತುಮಕೂರು: ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಕಾರಗಾನಹಟ್ಟಿ ಗ್ರಾಮದ ನರಸಿಂಹಮೂರ್ತಿ ಹಾಗೂ ಶಾರದಮ್ಮ ದಂಪತಿಯ ಪುತ್ರಿ ಪ್ರಿಯಾಂಕಾ (14) ಎಂದು ಗುರುತಿಸಲಾಗಿದೆ.

ಪ್ರಿಯಾಂಕಾ ತ್ರಯಂಬಕೇಶ್ವರ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಒಂದು ವಾರದಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದ ಆಕೆ, ಆಗಸ್ಟ್ 7ರಂದು ಮತ್ತೆ ಹಾಸ್ಟೆಲ್‌ಗೆ ವಾಪಸ್ ಆಗಿದ್ದಳು ಎಂದು ತಿಳಿದುಬಂದಿದೆ.

ಘಟನೆ ನಡೆದ ಬೆಳಗ್ಗೆ ಪ್ರಿಯಾಂಕಾ ಹಾಸ್ಟೆಲ್‌ನ ಶೌಚಾಲಯಕ್ಕೆ ತೆರಳಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾಳೆ. ಲೋ ಬಿಪಿ ಉಂಟಾದ ಹಿನ್ನೆಲೆಯಲ್ಲಿ ಆಕೆ ಕುಸಿದು ಬಿದ್ದಿರಬಹುದು ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಬಾಲಕಿ ಕುಸಿದು ಬಿದ್ದಿರುವುದನ್ನು ಗಮನಿಸಿದ ಹಾಸ್ಟೆಲ್ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಕರೆತರುವ ಮುನ್ನವೇ ಪ್ರಿಯಾಂಕಾ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಪಾವಗಡ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹಾಸ್ಟೆಲ್ ಸಿಬ್ಬಂದಿ ಹಾಗೂ ಸಂಬಂಧಪಟ್ಟವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಾಲಕಿಯ ಸಾವಿನ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories