25 ವರ್ಷದ ಯುವಕನಿಗೆ ಬಲವಂತವಾಗಿ ಗುಪ್ತಾಂಗದ ಶಸ್ತ್ರಚಿಕಿತ್ಸೆ; ಮಂಗಳಮುಖಿಯರು ಅರೆಸ್ಟ್
ಚಿತ್ರದುರ್ಗದಲ್ಲಿ 25 ವರ್ಷದ ಯುವಕನ ಇಚ್ಛೆಗೆ ವಿರುದ್ಧವಾಗಿ ಶಸ್ತ್ರಚಿಕಿತ್ಸೆ ಮಾಡಿಸಿ, ಹಿಂಸೆ ನೀಡಿದ ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನ ತಂದೆ ನೀಡಿದ ದೂರಿನ ಆಧಾರದಲ್ಲಿ ತನಿಖೆ ಮುಂದುವರಿದಿದೆ.

- ಯುವಕನಿಗೆ ಬಲವಂತದ ಶಸ್ತ್ರಚಿಕಿತ್ಸೆ ಆರೋಪ
- ಆರೋಪದಡಿ ಇಬ್ಬರು ಮಂಗಳಮುಖಿಯರ ಬಂಧನ
- ಯುವಕನ ತಂದೆ ನೀಡಿದ ದೂರಿನ ಆಧಾರದಲ್ಲಿ ತನಿಖೆ
ಚಿತ್ರದುರ್ಗ: ಯುವಕನೊಬ್ಬನ ಇಚ್ಛೆಗೆ ವಿರುದ್ಧವಾಗಿ ಆತನಿಗೆ ಗುಪ್ತಾಂಗದ ಶಸ್ತ್ರಚಿಕಿತ್ಸೆ (Surgery) ಮಾಡಿಸಿ, ದೈಹಿಕ ಹಿಂಸೆ ನೀಡಿದ ಆರೋಪದ ಮೇಲೆ ಇಬ್ಬರನ್ನು ಚಿತ್ರದುರ್ಗ ನಗರ ಠಾಣೆ ಪೊಲೀಸರು (Chitradurga Police) ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಬುದ್ಧನಗರ ನಿವಾಸಿಗಳಾದ ಅನುಷ್ಕಾ ಮತ್ತು ನಳಿನಾ ಎಂದು ಗುರುತಿಸಲಾಗಿದೆ. ಚಳ್ಳಕೆರೆ ಗೇಟ್ ಬಳಿ ಓಡಾಡುತ್ತಿದ್ದ ವೇಳೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಮುಂಬೈನಿಂದ ಬೆಂಗಳೂರು ಕಡೆ ಹೊರಟಿದ್ದ ಖಾಸಗಿ ಬಸ್ ಅಪಘಾತ; 15 ಮಂದಿಗೆ ಗಾಯ
ಪ್ರಕರಣದ ವಿವರಗಳ ಪ್ರಕಾರ, ಚಿತ್ರದುರ್ಗದಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದ 25 ವರ್ಷದ ಯುವಕನಿಗೆ ಹೂವು ನೀಡುವ ಸಂದರ್ಭದಲ್ಲಿ ಇಬ್ಬರ ಪರಿಚಯವಾಗಿತ್ತು ಎನ್ನಲಾಗಿದೆ. ನಂತರ ಆತನ ಆತ್ಮೀಯತೆಯನ್ನು ದುರುಪಯೋಗಪಡಿಸಿಕೊಂಡು, ಸೆಪ್ಟೆಂಬರ್ 1ರಂದು ಆತನ ಒಪ್ಪಿಗೆಯಿಲ್ಲದೆ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದಲ್ಲದೆ, ಯುವಕನ ತೊಡೆಗಳ ಮೇಲೆ ಬಿಸಿನೀರು ಮತ್ತು ಕೆಂಡ ಬಳಸಿ ಸುಟ್ಟು ಹಿಂಸೆ ನೀಡಿದ ಆರೋಪವೂ ಇದೆ. ಸದ್ಯ ಯುವಕ ತನ್ನ ಸ್ವಗ್ರಾಮದಲ್ಲಿ ವಾಸವಾಗಿದ್ದಾನೆ ಎಂದು ವರದಿಯಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಯುವಕನ ತಂದೆ ಅಕ್ಟೋಬರ್ 9ರಂದು ಪರಶುರಾಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣವನ್ನು ಚಿತ್ರದುರ್ಗ ನಗರ ಠಾಣೆಗೆ ವರ್ಗಾಯಿಸಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಆರೋಪಗಳ ಕುರಿತು ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



