Karnataka NewsCrime News
ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು
ತುಮಕೂರು (Tumakuru) ಜಿಲ್ಲೆಯ ತಿಪಟೂರು ಬಳಿ KSRTC Bus ಮತ್ತು ಬೈಕ್ ನಡುವೆ ಭೀಕರ ಅಪಘಾತ (accident) ಸಂಭವಿಸಿ, ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
- ಬಸ್, ಬೈಕ್ ನಡುವೆ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು
- ಬೈಕ್ ಸವಾರರು ಬಿದರೆಕೆರೆ ಗ್ರಾಮದ ಯುವಕರು
- ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಭೀಕರ ಅಪಘಾತ (road accident) ಸಂಭವಿಸಿದ್ದು, ಬೈಕ್ ಮತ್ತು KSRTC ಬಸ್ ನಡುವೆ ಡಿಕ್ಕಿಯಾಗಿ, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿ ಬಿದರೆಕೆರೆ ಗ್ರಾಮದ ಯೋಗೇಶ್ (23) ಮತ್ತು ದಯಾನಂದ್ (25) ಬೈಕ್‌ನಲ್ಲಿ ತುರುವೇಕೆರೆ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಎದುರಿನಿಂದ ಬಂದ KSRTC ಬಸ್ ಬೈಕ್‌ಗೆ ಜೋರಾಗಿ ಡಿಕ್ಕಿಯಾಗಿದೆ. ಭಾರಿ ವೇಗದ ಹೊಡೆತಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಯುವಕರು ಸ್ಥಳೀಯ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಅವರ ಅಕಾಲಿಕ ಸಾವಿನಿಂದ ಕುಟುಂಬ ಆಘಾತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ನೊಣವಿನಕೆರೆ ಪೊಲೀಸರು (police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two Bikers Killed in KSRTC Bus Collision
English Summary▼
Our Whatsapp Channel is Live Now 👇