ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರ ಸಾವು

ಧಾರವಾಡ ಜಿಲ್ಲೆಯ ಬೇಲೂರು ಸಮೀಪ ಟೈರ್ ಬದಲಿಸುತ್ತಿದ್ದ ಲಾರಿಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಧಾರವಾಡ, ಜೂನ್ 26: ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆ ಬದಿಯಲ್ಲಿ ಟೈರ್ ಬದಲಾಯಿಸುತ್ತಿದ್ದ ಲಾರಿಗೆ ವೇಗವಾಗಿ ಬಂದ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಮೃತರನ್ನು ಧಾರವಾಡ ತಾಲೂಕಿನ ಹಳೇ ತೇಗೂರು ನಿವಾಸಿ ಷಣ್ಮುಖ ಜೋಗಿ (28) ಹಾಗೂ ಉತ್ತರ ಪ್ರದೇಶ ಮೂಲದ ಸಾಗರ್ (30) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಟೈರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಲಾರಿ ಚಾಲಕ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಟೈರ್ ಬದಲಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಇದೇ ವೇಳೆ ಅದೇ ಮಾರ್ಗದಲ್ಲಿ ಬಂದ ಕ್ಯಾಂಟರ್ ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಗರಗ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

TRENDING ARTICLES1 / 5

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories