ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ; 2 ವರ್ಷದ ಮಗು ಸಾವು! ಇಬ್ಬರಿಗೆ ಗಂಭೀರ ಗಾಯ

ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ವಿಜಯಪುರ (Vijayapura): ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಎರಡು ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ನಡೆದಿದೆ.

ಅಪಘಾತದ ತೀವ್ರತೆಗೆ ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಕುಟುಂಬದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಅಪಘಾತದಲ್ಲಿ ರೇಣುಕಾ ಮತ್ತು ಯಮನವ್ವ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ವಿಜಯಪುರ ಜಿಲ್ಲಾಸ್ಪತ್ರೆಗೆ (Vijayapura District Hospital) ಕರೆದೊಯ್ದು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮೃತ ಮಗುವನ್ನು ರಾವುತ್ (2) ಎಂದು ಗುರುತಿಸಲಾಗಿದೆ. ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ರಭಸಕ್ಕೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಘಟನೆಗೆ ಸಂಬಂಧಿಸಿದಂತೆ ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಅಪಘಾತದ ಕುರಿತು ತನಿಖೆ ಕೈಗೊಂಡಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories