ರೈಲ್ವೆ ನಿಲ್ದಾಣದ ಬಳಿ ಮಹಿಳೆ ಮುಖದ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ
ಅಪರಿಚಿತ ಮಹಿಳೆ ರೈಲ್ವೆ ನಿಲ್ದಾಣದ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಮುಖದ ಮೇಲೆ ಕಲ್ಲು ಎತ್ತಿಹಾಕಿ ಗುರುತು ಪತ್ತೆಯಾಗದಂತೆ ಮಾಡಿದ್ದಾರೆ.
- ಅಪರಿಚಿತ ಮಹಿಳೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ
- ನಿರ್ಮಾಣ ಹಂತದ ಕಟ್ಟಡದಲ್ಲಿ ಶವ ಪತ್ತೆ
- ಮಾಹಿತಿ ಕಲೆ, ಪೊಲೀಸರಿಂದ ತನಿಖೆ ಆರಂಭ
ಹಾಸನ ನಗರದ ರೈಲ್ವೆ ನಿಲ್ದಾಣದ ಸಮೀಪ ಭೀಕರ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡದ ಒಳಗೆ ಸುಮಾರು 40 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಮುಖದ ಮೇಲೆ ಕಲ್ಲು ಎತ್ತಿಹಾಕಿರುವುದರಿಂದ ಗುರುತು ಪತ್ತೆಯಾಗದಂತೆ ಮಾಡಲಾಗಿದೆ.
ಈ ಘಟನೆಯು ಬೆಳಕಿಗೆ ಬಂದಿದ್ದು, ಕೆಲಸಕ್ಕೆ ಬಂದ ಕಾರ್ಮಿಕರು ಮೃತದೇಹವನ್ನು ಕಾಣುತ್ತಿದ್ದಂತೆಯೇ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ರೈಲ್ವೆ ಎಸ್‌ಪಿ ಸೌಮ್ಯಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ, ಜಾನುವಾರು ಹುಡುಕಲು ಹೋಗಿದ್ದ ಮಹಿಳೆ ಸಾವು
ನಿರ್ಮಾಣ ಹಂತದ ಕಟ್ಟಡದಲ್ಲಿ ಯಾವ ರೀತಿಯ ಭದ್ರತಾ ವ್ಯವಸ್ಥೆಯೂ ಇರದ ಕಾರಣ ದುಷ್ಕರ್ಮಿಗಳು ಈ ಕೃತ್ಯವೆಸಗಿದಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಗಂಭೀರವಾಗಿ ಮುಂದುವರಿಸಿದ್ದಾರೆ.
ರೈಲ್ವೆ ಎಸ್‌ಪಿ ಸೌಮ್ಯಲತಾ ಮಾಹಿತಿ ಹಂಚಿಕೊಳ್ಳುತ್ತಾ, “ಮಹಿಳೆಯ ಶವ ಕಟ್ಟಡದ ಒಳಗೆ ಪತ್ತೆಯಾಗಿದೆ. ಮುಖದ ಮೇಲೆ ಕಲ್ಲು ಎತ್ತಿಹಾಕಿರುವುದರಿಂದ ಗುರುತು ಪತ್ತೆಯಾಗುತ್ತಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ,” ಎಂದು ತಿಳಿಸಿದರು.
Unknown Woman Brutally Murdered Near Railway Station
Our Whatsapp Channel is Live Now 👇