ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ ವಿನಯ್ ಕುಲಕರ್ಣಿ

ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಗುರುವಾರ ಮತ್ತೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

( Kannada News Today ) : ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಗುರುವಾರ ಮತ್ತೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಧಾರವಾಡದ ಮೂರನೇ ಹೆಚ್ಚುವರಿ ಜಿಲ್ಲಾ ಹಾಗೂ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಆಗಮಿಸಿದ ವಕೀಲರು ಜಾಮೀನು ಅರ್ಜಿ ಸಲ್ಲಿಸಿದರು.

ಈ ಹಿಂದೆ ನವೆಂಬರ್ 9 ಕ್ಕೆ ಜಾಮೀನು ಅರ್ಜಿಯನ್ನು ಭರತ್ ಕುಮಾರ್ ಎಂ ಅವರು ಸಲ್ಲಿಸಿದ್ದರು. ಆದರೆ ಆ ಬಳಿಕ ಅದನ್ನು ಅವರು ಕುಟುಂಬ ಸದಸ್ಯರ ಕೋರಿಕೆ ಮೇರೆಗೆ ಮರಳಿ ಪಡೆದಿದ್ದರು.

ಇದೀಗ ಮತ್ತೆ ವಿನಯ್ ಕುಲಕರ್ಣಿ ಪರ ವಕೀಲರಾಗಿರುವ ಬಾಹುಬಲಿ ದನವಾಡಿ ಅವರು ಇಂದು ಹೊಸ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಯಾವಾಗ ವಿಚಾರಣೆಗೆ ಬರುತ್ತದೆ. ಅದಕ್ಕೆ ಸಿಬಿಐ ಅಧಿಕಾರಿಗಳು ಯಾವ ರೀತಿಯ ತಕರಾರು ಅರ್ಜಿ ಸಲ್ಲಿಸುತ್ತಾರೆ ಎಂಬುದರ ಮೇಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ ವಾಗಲಿದೆ.

Scroll Down To More News Today