ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ, ಜಾನುವಾರು ಹುಡುಕಲು ಹೋಗಿದ್ದ ಮಹಿಳೆ ಸಾವು
ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಈ ಘಟನೆಯು ಸ್ಥಳೀಯರಲ್ಲಿ ಭಯ ಮತ್ತು ಆಕ್ರೋಶ ಮೂಡಿಸಿದೆ.
- ಹಾಸನ ಜಿಲ್ಲೆಯಲ್ಲಿ ದಾರುಣ ಘಟನೆ
- ಜಾನುವಾರು ಹುಡುಕಲು ಹೋದ ಮಹಿಳೆ ಮೇಲೆ ಕಾಡಾನೆ ದಾಳಿ
- ಗ್ರಾಮಸ್ಥರ ಆಕ್ರೋಶ, ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬೆಳ್ಳಾವರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಈ ಘಟನೆಯು ಸ್ಥಳೀಯರಲ್ಲಿ ಭಯ ಮತ್ತು ಆಕ್ರೋಶ ಮೂಡಿಸಿದೆ.
ಕನಗುಪ್ಪೆ ಗ್ರಾಮದ 60 ವರ್ಷದ ದ್ಯಾವಮ್ಮ ಬೆಳಿಗ್ಗೆ ಜಾನುವಾರುಗಳನ್ನು ಹುಡುಕಲು ಹೋಗಿದ್ದರು. ಆದರೆ ಅವರು ಮನೆಗೆ ಮರಳದೇ ಇರುವುದು ಕುಟುಂಬಸ್ಥರಲ್ಲಿ ಆತಂಕ ಉಂಟುಮಾಡಿತು. ಹಲವಾರು ತಾಸುಗಳ ಬಳಿಕ, ಹುಡುಕಾಟ ನಡೆಸಿದ ಕುಟುಂಬಸ್ಥರು ಅವರ ಶವವನ್ನು ಮುಳ್ಳಿನ ಪೊದೆಯಲ್ಲಿ ಪತ್ತೆ ಹಚ್ಚಿದರು.
ದ್ಯಾವಮ್ಮ ದೇಹದ ಮೇಲೆ ಗಾಯಗಳ ಗುರುತುಗಳು ಕಂಡುಬಂದಿದ್ದು, ಅಲ್ಲದೆ ಆನೆಯ ಹೆಜ್ಜೆಗಳ ಕುರುಹುಗಳು ಕೂಡ ಸ್ಥಳದಲ್ಲಿ ಪತ್ತೆಯಾಗಿವೆ. ಈ ನಿಟ್ಟಿನಲ್ಲಿ, ಕಾಡಾನೆ ದಾಳಿಯಿಂದಲೇ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ, ಅರೇಹಳ್ಳಿ ಪೊಲೀಸ್ ಠಾಣೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭ, ಸ್ಥಳೀಯರು ಮತ್ತು ಮೃತರ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
Wild Elephant Attack: Woman Dies in Tragic Incident
Our Whatsapp Channel is Live Now 👇