ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಸ್ಕೂಟಿ ಸವಾರೆ ಸಾವು

ಹುಬ್ಬಳ್ಳಿಯ ಶಿವಶಂಕರ ಕಾಲೋನಿ ಬಳಿ ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದ ವಿದ್ಯಾ ಗೌಡರ್ ಅವರ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ, ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ಗಾಳಿಪಟದ (kite Thread) ದಾರವೊಂದು ಮಹಿಳೆಯ ಜೀವವನ್ನೇ ಕಸಿದುಕೊಂಡಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸ್ಕೂಟಿಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ 38 ವರ್ಷದ ವಿದ್ಯಾ ಗೌಡರ್, ಮಾಂಜಾ ದಾರ (Manja Thread) ಕುತ್ತಿಗೆಗೆ ಸಿಲುಕಿದ ಪರಿಣಾಮ ಮೃತಪಟ್ಟಿದ್ದಾರೆ.

ವಿದ್ಯಾ ಅವರು ಲ್ಯಾಬ್ ತಂತ್ರಜ್ಞೆಯಾಗಿ (Lab Technician) ಕೆಲಸ ಮಾಡುತ್ತಿದ್ದರು. ಎಂದಿನಂತೆ ಮನೆಯಿಂದ ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಶಿವಶಂಕರ ಕಾಲೋನಿ ಸಮೀಪ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮೈಸೂರು ಜಂಬೂಸವಾರಿ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ

ಪ್ರಯಾಣದ ವೇಳೆ ಏಕಾಏಕಿ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿದೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ವಿದ್ಯಾ ಅವರಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಹೀಗೆ ದುರಂತ ಅಂತ್ಯ ಕಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಘಟನೆಗೆ ಸಂಬಂಧಿಸಿದಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ (Old Hubballi Police Station) ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳದ ಮಾಹಿತಿ ಹಾಗೂ ಅಪಘಾತದ ಸಂದರ್ಭಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories