ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ರಸ್ತೆ ದಾಟುತ್ತಿದ್ದ 22 ವರ್ಷದ ಯುವತಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.

  • ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಡಿಕ್ಕಿಯಾಗಿ ಯುವತಿ ಸಾವು
  • ಭೂಮಿಕಾ ಎಂಬ 22 ವರ್ಷದ ಯುವತಿ ಮೃತರು
  • ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Expressway) ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವತಿ ಮೃತಪಟ್ಟಿದ್ದಾರೆ.

ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ನಿವಾಸಿ ಭೂಮಿಕಾ ಮೃತ ಯುವತಿ. ಅವರು ಸ್ನೇಹಿತರೊಂದಿಗೆ ಚನ್ನಪಟ್ಟಣಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ತಡರಾತ್ರಿ ಸಂಕಲಗೆರೆ ಬಳಿ ರಸ್ತೆ ದಾಟಲು ಭೂಮಿಕಾ ಮುಂದಾಗಿದ್ದರು ಎನ್ನಲಾಗಿದೆ. ಇದೇ ವೇಳೆ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಯುವತಿ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ.

ಇದನ್ನೂ ಓದಿ: ಬೀದರ್: ಪೆಟ್ರೋಲ್ ಬಂಕ್‌ನಲ್ಲಿ ವಿದ್ಯುತ್ ಸ್ಪರ್ಶಿಸಿ 19 ವರ್ಷದ ಯುವಕ ಸಾವು

ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದು, ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ (Channapatna Traffic Police) ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ತನಿಖೆ ಮುಂದುವರಿದಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories