ನಗ್ನ ವಿಡಿಯೋ ಚಿತ್ರೀಕರಿಸಿ ಹಂಚಿಕೆ! ಬಾಣಂತಿಯ ಆರೈಕೆಗೆ ಬಂದಿದ್ದ ಯುವತಿಯ ಹ್ಯೇಯ ಕೃತ್ಯ

ಬಾಣಂತಿಯ ಆರೈಕೆಗೆ ಬಂದಿದ್ದ ಯುವತಿಯೊಬ್ಬಳು ಮಹಿಳೆಯ ಖಾಸಗಿ ದೃಶ್ಯಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ವಾಟ್ಸ್‌ಆ್ಯಪ್‌ನಲ್ಲಿ ಹಂಚಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು (Kasaragod) ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಎರಡನೇ ಮಗುವಿನ ಹೆರಿಗೆಯ ಬಳಿಕ ಮಹಿಳೆಯ ಆರೈಕೆಗಾಗಿ ಬಂದಿದ್ದ ಯುವತಿಯೊಬ್ಬಳು, ಆರೈಕೆಯ ನೆಪದಲ್ಲಿ ಮಹಿಳೆಯ ಖಾಸಗಿ ದೃಶ್ಯಗಳನ್ನು ರಹಸ್ಯವಾಗಿ ಚಿತ್ರೀಕರಿಸಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸೆಪ್ಟೆಂಬರ್ 7ರಿಂದ 20ರ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ಮೂಲದ 25 ವರ್ಷದ ಸುಲೈಖಾ ರಾಸಿಯಾ (Sulaikha Rasiya) ಪ್ರಕರಣದ ಆರೋಪಿಯಾಗಿದ್ದು, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕಾಸರಗೋಡು ನಗರ ಪೊಲೀಸರು (Kasaragod City Police) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯ ಮೊಬೈಲ್ ಫೋನ್‌ ಅನ್ನು ಮಹಿಳೆ ಪರಿಶೀಲಿಸಿದಾಗ ತನ್ನದೇ ಖಾಸಗಿ ವಿಡಿಯೋಗಳು ಮತ್ತು ಫೋಟೋಗಳನ್ನು ಚಿತ್ರೀಕರಿಸಿರುವುದು ಬೆಳಕಿಗೆ ಬಂದಿದೆ. ಈ ದೃಶ್ಯಗಳನ್ನು ಹಲವರಿಗೆ ವಾಟ್ಸ್‌ಆ್ಯಪ್ (WhatsApp) ಮೂಲಕ ಕಳುಹಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅವುಗಳನ್ನು ಪಡೆದವರ ಪೈಕಿ ಆರೋಪಿಯ ಪತಿಯೂ ಇದ್ದಾನೆ ಎನ್ನಲಾಗಿದೆ.

ವಿಷಯ ತಿಳಿದ ಬಳಿಕ ಮಹಿಳೆ ತನ್ನ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳೆಯನ್ನು ಇತರರೊಂದಿಗೆ ಸೇರಿಕೊಂಡು ಬ್ಲ್ಯಾಕ್‌ಮೇಲ್ (Blackmail) ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿತ್ತೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದು, ದೃಶ್ಯಗಳನ್ನು ಯಾರಿಗೆಲ್ಲ ಕಳುಹಿಸಲಾಗಿದೆ ಮತ್ತು ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories