ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ! ಬೆಂಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

ರಾಜ್ಯದ ಹಲವೆಡೆ ಮತ್ತೆ ಮಳೆಯ ಮುನ್ಸೂಚನೆ

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಾತಾವರಣದಲ್ಲಿ (Karnataka Weather) ಬದಲಾವಣೆ ಕಂಡುಬರುತ್ತಿದ್ದು, ಹಲವೆಡೆ ಸಾಧಾರಣ ಮಳೆಯಾಗಿದೆ. ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಸಹ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದರ ಹಿನ್ನೆಲೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚು ಕಾಣಿಸಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಈ ಭಾಗಗಳಲ್ಲಿ ಕೆಲವೊಮ್ಮೆ ಗಾಳಿ ವೇಗವು 30 ರಿಂದ 40 ಕಿಲೋಮೀಟರ್ ಪ್ರತಿ ಗಂಟೆವರೆಗೆ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಎಲ್ಲೆಲ್ಲಿ ಹೆಚ್ಚು ಮಳೆ ಸಾಧ್ಯತೆ?

ಕರಾವಳಿ ಭಾಗವಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚು ಕಾಣಿಸಿಕೊಳ್ಳಬಹುದು. ಅದೇ ರೀತಿ ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಬೀದರ್, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಹ ಗುಡುಗು ಮಳೆಯ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೂಡ ಗಾಳಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಒಣಹವೆಯ ವಾತಾವರಣ ಮುಂದುವರಿಯಬಹುದು.

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರು ಭಾಗದಲ್ಲಿ ಇಂದು ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲದಿದ್ದರೂ, ಮೋಡಾವೃತ ವಾತಾವರಣದಿಂದ ಸ್ವಲ್ಪ ತಂಪಾದ ಅನುಭವವಾಗಬಹುದು.

Related Stories