ಗೃಹಲಕ್ಷ್ಮಿ ಹಣ ಡಿಸೆಂಬರ್ ನಲ್ಲೂ ಬಾರದೇ ಇದ್ರೆ, ಈ ದಾಖಲೆ ನಿಮ್ಮ ಬಳಿ ಇರಲೇಬೇಕು

ಗೃಹಲಕ್ಷ್ಮಿ ಯೋಜನೆ (Gruha lakshmi Yojana) ಹಣ ಬಹುತೇಕ ಎಲ್ಲಾ ಅರ್ಜಿದಾರ ಮಹಿಳೆಯರ ಖಾತೆಗೆ (Bank Account) ಜಮಾ ಆಗಿದೆ, ಇನ್ನು ಉಳಿದ ಮಹಿಳೆಯರಿಗೆ ಇದೇ ಡಿಸೆಂಬರ್ ಅಂತ್ಯದ ಒಳಗೆ ಅಂದರೆ 2023ರ ಒಳಗೆ ಪ್ರತಿಯೊಬ್ಬರ ಖಾತೆಗೂ ಹಣ ಜಮಾ (Money Deposit) ಆಗುವಂತೆ ಮಾಡಲಾಗುವುದು ಎಂದು ಸ್ವತಃ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಭರವಸೆ ನೀಡಿದ್ದಾರೆ.
ಹೌದು, ಇತ್ತೀಚಿಗೆ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದು ತಾಂತ್ರಿಕ ದೋಷ (technical error) ಪರಿಹಾರಕ್ಕಾಗಿ ಕೆಲವು ಸೂಕ್ತ ಕ್ರಮಗಳನ್ನು ಸೂಚಿಸಿದ್ದಾರೆ.
ಈ ಮೂಲಕ ಯಾವ ಮಹಿಳೆಯರ ಖಾತೆಗೆ ಹಣ ಜಮಾ (Money Transfer) ಆಗಿಲ್ವೋ ಅವರು ಚಿಂತೆ ಮಾಡುವ ಅಗತ್ಯವಿಲ್ಲ ಅಂಥವರ ಮನೆ ಬಾಗಿಲಿಗೆ ಅಧಿಕಾರಿಗಳು (officers) ಹೋಗಿ ಸಮಸ್ಯೆ ಪರಿಹರಿಸಿ ಖಾತೆಗೆ ಹಣ ಜಮಾ ಆಗುವಂತೆ ಮಾಡುತ್ತಾರೆ, ಅಂಗನವಾಡಿ ಸಹಾಯಕಿಯರು ಹಾಗೂ ಗ್ರಾಮ ಪಂಚಾಯತ್ ಕಡೆಯಿಂದ ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ
ರೇಷನ್ ಕಾರ್ಡ್ ನಿಯಮ ಬದಲಾವಣೆ, ಬಿಪಿಎಲ್ ಕಾರ್ಡ್ ರದ್ದಾಗುವ ಮುನ್ನ ಈ ಕೆಲಸ ಮಾಡಿ
ಅಂಗನವಾಡಿ ಸಹಾಯಕಿಯರು ಮನೆ ಬಾಗಿಲಿಗೆ ಬರಲಿದ್ದಾರೆ
ಆಯಾ ಗ್ರಾಮದಲ್ಲಿ ಇರುವ ಅಂಗನವಾಡಿ ಸಹಾಯಕಿಯರು ಪ್ರತಿಯೊಂದು ಮನೆಗೂ ತೆರಳಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗದೆ ಇದ್ದಲ್ಲಿ ಅವರನ್ನು ತಾವೇ ಸ್ವತಃ ಬ್ಯಾಂಕಿಗೆ ಕರೆದುಕೊಂಡು ಹೋಗಿ Aadhaar seeding ಹಾಗೂ ಮತ್ತಿತರ ದಾಖಲೆಗಳು ಸರಿಯಾಗಿ ಮಾಡಿಕೊಡುತ್ತಾರೆ.
ಏನಾದರೂ ಸಮಸ್ಯೆ ಕಂಡು ಬಂದಲ್ಲಿ ಅವರೇ ಬ್ಯಾಂಕ್ ಸಿಬ್ಬಂದಿಗಳ (bank employees) ಜೊತೆಗೆ ಮಾತನಾಡಿ ಮಹಿಳೆಯರ ಸಮಸ್ಯೆಯನ್ನು ಸರಿಪಡಿಸಲಿದ್ದಾರೆ.
ರೈತರ ಖಾತೆಗೆ ₹2,000 ರೂಪಾಯಿ ಜಮಾ! ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ
ಗೃಹಲಕ್ಷ್ಮಿ ಅದಾಲತ್ ನಡೆಸಲಾಗುವುದು! (Gruha lakshmi Adalat)

ಆದರೆ ಇದಕ್ಕಾಗಿ ಮಹಿಳೆಯರು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಇನ್ನು ಮುಂದೆ ನಿಮ್ಮ ಖಾತೆಗೆ ಹಣ ಬಾರದೆ ಇದ್ದರೆ ತಕ್ಷಣವೇ ನೀವು ಅದಾಲತ್ ದೂರು ಸಲ್ಲಿಸಬಹುದು. ಗ್ರಾಮ ಪಂಚಾಯತ್ ಸಿಬ್ಬಂದಿ ನಿಮ್ಮ ಮನೆಗೆ ಬಂದು ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ.
ತಾಂತ್ರಿಕ ದೋಷಗಳನ್ನು ಪರಿಹರಿಸಿ ಪ್ರತಿಯೊಬ್ಬ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲು ಸಹಕರಿಸಲಿದ್ದಾರೆ. ಇನ್ನು ಅದಾಲತ್ ಪ್ರಕ್ರಿಯೆ ಮೂಲಕ ಗ್ರಾಮ ಪಂಚಾಯತ್ (gram Panchayat) ಸಿಬ್ಬಂದಿ ಯಾವ ಮಹಿಳೆಯ ಖಾತೆಗೆ ಹಣ ಜಮಾ ಆಗಿಲ್ಲ ಎನ್ನುವ ವಿವರವನ್ನು ಸರ್ಕಾರಕ್ಕೆ ನೀಡಬೇಕು.
ಗೃಹಲಕ್ಷ್ಮಿ ಬಾಕಿ ಮೊತ್ತ ಜಮೆ, ಇಂತಹ ಮಹಿಳೆಯರಿಗೆ ಮಾತ್ರ ಹಣ ವರ್ಗಾವಣೆ; ಖಾತೆ ಚೆಕ್ ಮಾಡಿ
ಈ ದಾಖಲೆಗಳು ನಿಮ್ಮ ಬಳಿ ಇರಲಿ
ಇನ್ನು ನಿಮ್ಮ ಮನೆ ಬಾಗಿಲಿಗೆ ಗ್ರಾಮ್ ಪಂಚಾಯತ್ ಸಿಬ್ಬಂದಿಗಳಾಗಲಿ ಅಥವಾ ಅಂಗನವಾಡಿ ಸಹಾಯಕಿಯರಾಗಲಿ ಬಂದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಸೇವಾ ಕೇಂದ್ರಗಳಲ್ಲಿ ಕೊಡಲಾಗಿದ್ದ ಸ್ವೀಕೃತಿ ಪ್ರತಿ (acknowledgement) ಆಧಾರ್ ಕಾರ್ಡ್ (Aadhaar Card), ರೇಷನ್ ಕಾರ್ಡ್ (Ration Card), ಬ್ಯಾಂಕ್ ಖಾತೆಯ ವಿವರ (Bank Account Details) ಮೊದಲಾದ ದಾಖಲೆಗಳನ್ನು ಸಿದ್ಧವಾಗಿ ಇರಿಸಿಕೊಳ್ಳಿ
ಎಲ್ಲ ದಾಖಲೆಗಳನ್ನು ಪರಿಶೀಲಿಸಿ ನಿಮ್ಮ ಖಾತೆಗೆ ಹಣ ಬಾರದೇ ಇರುವುದಕ್ಕೆ ಕಾರಣ ಹುಡುಕಿ ಪರಿಹಾರವನ್ನು ಕೂಡ ಸೂಚಿಸುತ್ತಾರೆ. ಒಟ್ಟಿನಲ್ಲಿ ಶತಾಯಗತಾಯ ಡಿಸೆಂಬರ್ ಅಂತ್ಯದ ಒಳಗೆ ಗೃಹಲಕ್ಷ್ಮಿ ಯೋಜನೆಯ 100% ಯಶಸ್ಸು ಸಾಧಿಸಲು ಸರ್ಕಾರ ಪ್ರಯತ್ನಿಸುತ್ತಿದೆ.
ಇಂತಹವರ ರೇಷನ್ ಕಾರ್ಡ್ ರದ್ದು! ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಹಣ ಕೂಡ ಸಿಗೋಲ್ಲ
you must have this documents with you to Get Gruha Lakshmi Scheme Money



