ಸಕಲೇಶಪುರ: ಇಬ್ಬರು ಯುವಕರ ಜೊತೆ ಲಾಡ್ಜ್ಗೆ ಬಂದಿದ್ದ ಬೆಂಗಳೂರು ಯುವತಿ ಶವವಾಗಿ ಪತ್ತೆ
ಸಕಲೇಶಪುರದ ಲಾಡ್ಜ್ನಲ್ಲಿ ಬೆಂಗಳೂರಿನ 23 ವರ್ಷದ ಯುವತಿ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯೊಂದಿಗೆ ಪ್ರವಾಸಕ್ಕೆ ಬಂದಿದ್ದ ಇಬ್ಬರು ಯುವಕರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

- ಲಾಡ್ಜ್ನಲ್ಲಿ ಯುವತಿಯ ಅನುಮಾನಾಸ್ಪದ ಸಾವು
- ಬೆಂಗಳೂರಿನ 23 ವರ್ಷದ ವರ್ಷ ಮೃತಳು
- ಇಬ್ಬರು ಯುವಕರು ಪೊಲೀಸ್ ವಿಚಾರಣೆಯಲ್ಲಿ
ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಕೂಡಿಗೆ ಪ್ರದೇಶದಲ್ಲಿರುವ ಲಾಡ್ಜ್ವೊಂದರಲ್ಲಿ (Sakleshpur Lodge) ಬೆಂಗಳೂರಿನ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಬೆಂಗಳೂರು ಮೂಲದ ವರ್ಷ (23) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 11ರಂದು ವರ್ಷ ಇಬ್ಬರು ಯುವಕರೊಂದಿಗೆ ಪ್ರವಾಸಕ್ಕಾಗಿ ಸಕಲೇಶಪುರಕ್ಕೆ ಬಂದಿದ್ದರು. ಮೂವರು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಬಳಿಕ ಲಾಡ್ಜ್ನ ಒಂದೇ ಕೊಠಡಿಯಲ್ಲಿ ತಂಗಿದ್ದರು ಎನ್ನಲಾಗಿದೆ.
ಮಂಗಳವಾರ ಲಾಡ್ಜ್ನ ಸ್ನಾನಗೃಹದಲ್ಲಿ ವರ್ಷ ಶವವಾಗಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಜೊತೆಯಲ್ಲಿದ್ದ ಇಬ್ಬರು ಯುವಕರು ಆಕೆಯನ್ನು ಆಸ್ಪತ್ರೆಗೆ (Hospital) ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ ಎನ್ನಲಾಗಿದೆ.
ನಂತರ ಸಕಲೇಶಪುರದ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆ (Postmortem)ಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರುವ ಸಾಧ್ಯತೆಯಿದೆ.
ಘಟನೆ ಕುರಿತು ಮಾಹಿತಿ ಪಡೆದ ಡಿವೈಎಸ್ಪಿ ಮಾಲತೀಶ್ ಹಾಗೂ ಗ್ರಾಮಾಂತರ ಪೊಲೀಸರು ಲಾಡ್ಜ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಡ್ಜ್ನಲ್ಲಿದ್ದ ಇಬ್ಬರು ಯುವಕರು ಪೊಲೀಸ್ ವಶದಲ್ಲಿದ್ದು, ಅವರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ, ಲಾಡ್ಜ್ ಅನ್ನು ಅಗತ್ಯ ಅನುಮತಿ ಇಲ್ಲದೆ ನಡೆಸಲಾಗುತ್ತಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಪ್ರಕರಣದ ತನಿಖೆ (Investigation) ಮುಂದುವರಿದಿದ್ದು, ಯುವತಿಯ ಸಾವಿನ ಹಿಂದಿನ ನಿಖರ ಕಾರಣದ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



