ಬೈಕ್ ಅಪಘಾತ! ಗಣೇಶ ಮೂರ್ತಿ ತರಲು ಹೋಗಿದ್ದ ಯುವಕ ದಾರುಣ ಸಾವು

ಕಲಬುರಗಿಯಲ್ಲಿ ಗಣೇಶ ಮೂರ್ತಿ ತರಲು ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಾಯಾಳುವಿಗೆ ಚಿಕಿತ್ಸೆ ಮುಂದುವರಿದಿದೆ.

  • ಬೈಕ್ ಅಪಘಾತದಲ್ಲಿ ಯುವಕ ಸಾವು
  • ಗಣೇಶ ಮೂರ್ತಿ ತರಲು ಹೋಗಿದ್ದಾಗ ದುರಂತ
  • ಹೀರಾಪುರ ಫ್ಲೈಓವರ್‌ನಲ್ಲಿ ಅಪಘಾತ

ಕಲಬುರಗಿ (Kalaburagi): ಗಣೇಶ ಮೂರ್ತಿ ತರಲು ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನಿಗೆ ರಸ್ತೆ ಅಪಘಾತ (Road Accident) ಮಾರಕವಾಗಿ ಪರಿಣಮಿಸಿದೆ. ನಗರದ ಹೀರಾಪುರ ರಸ್ತೆಯ ಫ್ಲೈಓವರ್‌ನಲ್ಲಿ ನಡೆದ ಅಪಘಾತದಲ್ಲಿ ಕೊಟನೂರು ಬಡಾವಣೆಯ ಪ್ರಶಾಂತ್ ಬಿರಾದರ್ (Prashanth Biradar) ಮೃತಪಟ್ಟಿದ್ದಾರೆ.

ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ ಮತ್ತೊಂದು ಬೈಕ್ ಟಚ್ ಆಗಿದೆ ಎನ್ನಲಾಗಿದ್ದು, ನಿಯಂತ್ರಣ ತಪ್ಪಿದ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಇಬ್ಬರ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಲಾಗಿತ್ತು.

ತೀವ್ರವಾಗಿ ಗಾಯಗೊಂಡಿದ್ದ ಪ್ರಶಾಂತ್ ಬಿರಾದರ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಯುವಕನ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನೊಬ್ಬ ಗಾಯಾಳುವಿಗೂ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-1ರಲ್ಲಿ (Kalaburagi Traffic Police) ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕುರಿತು ತನಿಖೆ (Investigation) ನಡೆಸುತ್ತಿದ್ದಾರೆ.

ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ತರಲು ತೆರಳುತ್ತಿದ್ದ ವೇಳೆ ನಡೆದ ಈ ದುರಂತ ಸ್ಥಳೀಯರಲ್ಲಿ ಬೇಸರ ಮೂಡಿಸಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories