ಜಿಪಂ, ತಾಪಂ ಮೀಸಲು ಕರಡು ಅಧಿಸೂಚನೆ ನಾಳೆಯೇ ಪ್ರಕಟ: ಈಶ್ವರ ಖಂಡ್ರೆ

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆಯೊಳಗೆ ಪ್ರಾಥಮಿಕ ಕರಡು ಅಧಿಸೂಚನೆ ಪ್ರಕಟವಾಗಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

  • ಜಿಪಂ, ತಾಪಂ ಮೀಸಲು ಪ್ರಾಥಮಿಕ ಕರಡು ನಾಳೆ ಪ್ರಕಟ
  • ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಪೂರ್ಣ
  • ಪಂಚಾಯಿತಿ ಚುನಾವಣೆ ಜನವರಿಯಲ್ಲಿ ನಡೆಯುವ ಸಾಧ್ಯತೆ

ಜಿಲ್ಲಾ ಪಂಚಾಯಿತಿ (Zilla Panchayat) ಮತ್ತು ತಾಲೂಕು ಪಂಚಾಯಿತಿ (Taluk Panchayat) ಚುನಾವಣೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆಯೊಳಗೆ ಪ್ರಾಥಮಿಕ ಕರಡು ಅಧಿಸೂಚನೆ ಹೊರಬೀಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ (Eshwar Khandre) ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು. ಮೊದಲ ಹಂತದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಹಾಫ್ ಹೆಲ್ಮೆಟ್ ಬಳಕೆ ನಿಷೇಧ, ಉಲ್ಲಂಘಿಸಿದರೆ ದಂಡ! ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ

ಪ್ರಾಥಮಿಕ ಕರಡು ಅಧಿಸೂಚನೆ ಪ್ರಕಟವಾದ ಬಳಿಕ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಚುನಾವಣೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ (State Election Commission) ಸಲ್ಲಿಸಲಾಗುವುದು. ಚುನಾವಣೆಯ ವೇಳಾಪಟ್ಟಿ ಸೇರಿದಂತೆ ಮುಂದಿನ ಜವಾಬ್ದಾರಿಯನ್ನು ಚುನಾವಣಾ ಆಯೋಗ ನಿರ್ವಹಿಸಲಿದೆ ಎಂದು ಖಂಡ್ರೆ ತಿಳಿಸಿದರು.

ವರ್ಷಾಂತ್ಯದೊಳಗೆ ಜಿಪಂ ಮತ್ತು ತಾಪಂ ಚುನಾವಣೆ ನಡೆಯಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಎಸ್‌ಐಆರ್. (SIR) ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಇದನ್ನೂ ಓದಿ: ರೈಲ್ವೆ ಸಿಹಿಸುದ್ದಿ: ದಸರಾ ಹಬ್ಬಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಬೀದರ್‌ಗೆ ವಿಶೇಷ ರೈಲು

ಕೇಂದ್ರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ (Final Voter List) ಒದಗಿಸುವಲ್ಲಿ ವಿಳಂಬವಾದರೆ, ಚುನಾವಣೆ ಜನವರಿಯಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಹೇಳಿದರು.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories