2 ಕೋಟಿ ರೂ. ವೆಚ್ಚದಲ್ಲಿ ಉಚಗಾಂವ ಕೆರೆ ಅಭಿವೃದ್ಧಿಗೆ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

2 ಕೋಟಿ ರೂ. ವೆಚ್ಚದಲ್ಲಿ ಉಚಗಾಂವ (ಉಚಗಾಂವ್) ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಚಾಲನೆ ನೀಡಿದರು.

ಉಚಗಾಂವ ಕೆರೆ ಅಭಿವೃದ್ಧಿ ಸಂಬಂಧ ಲಕ್ಷ್ಮಿ ಹೆಬ್ಬಾಳಕರ್ ಕೆರೆ ಅಭಿವೃದ್ಧಿ ಸೇರಿದಂತೆ ಗ್ರಾಮಸ್ಥರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ, ತ್ವರಿತವಾಗಿ ಅವುಗಳ ನಿವಾರಣೆಯ ಭರವಸೆ ನೀಡಿದರು. ಈ ವೇಳೆ ಲಕ್ಷ್ಮಿ ಹೆಬ್ಬಾಳಕರ್ ಉಚಗಾಂವ ಕೆರೆ ಅಭಿವೃದ್ಧಿಗೆ ಚಾಲನೆ ನೀಡಿದರು.

ಬೆಳಗಾವಿ (Kannada News) :  2 ಕೋಟಿ ರೂ. ವೆಚ್ಚದಲ್ಲಿ ಉಚಗಾಂವ (ಉಚಗಾಂವ್) ಕೆರೆ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿ ಗ್ರಾಮೀಣ ಭಾಗದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಚಾಲನೆ ನೀಡಿದರು.
ಸಣ್ಣ ನೀರಾವರಿ ಇಲಾಖೆಯಿಂದ ಹಣ ಮಂಜೂರಾಗಿದ್ದು, ಕೆರೆ ವಿಸ್ತೀರ್ಣ ಹೆಚ್ಚಿಸುವುದು, ಕೆರೆ ದಂಡೆ ಗುಂಟ ವಾಕಿಂಗ್ ಟ್ರ್ಯಾಕ್ ನಿರ್ಮಾಣ, ವಿದ್ಯುತ್ ದೀಪ ಅಳವಡಿಕೆ ಮೊದಲಾದ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳಕರ್ ಕೆರೆ ಅಭಿವೃದ್ಧಿ ಸೇರಿದಂತೆ ಗ್ರಾಮಸ್ಥರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ, ತ್ವರಿತವಾಗಿ ಅವುಗಳ ನಿವಾರಣೆಯ ಭರವಸೆ ನೀಡಿದರು.

ಕೆರೆ ಅಭಿವೃದ್ಧಿ ಮತ್ತು ಸೌಂದರ್ಯೀಕರಣ ಕಾಮಗಾರಿ ಗ್ರಾಮಸ್ಥರ ಅಪೇಕ್ಷೆಯಂತೆ ನಡೆಯಲಿದ್ದು ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಅನಗತ್ಯವಾಗಿ ಯಾರೂ ಅಡ್ಡಿ ಮಾಡದೆ, ಕಾಮಗಾರಿಯ ಪ್ರಗತಿಯನ್ನು ಗಮನಿಸಬೇಕು ಎಂದು ಅವರು ಸೂಚಿಸಿದರು.

ಮೃಣಾಲ ಹೆಬ್ಬಾಳಕರ್, ಯುವರಾಜ ಕದಂ, ಎಲ್.ಡಿ.ಚೌಗಲೆ, ಬಾಳಾ ದೇಸಾಯಿ, ಅಮಯ್ ಕದಂ ಮೊದಲಾದವರು ಇದ್ದರು.

ಉಚಗಾಂವ (ಉಚಗಾಂವ್) ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ - Belgaum News in Kannada
ಉಚಗಾಂವ (ಉಚಗಾಂವ್) ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ
Web Title : Lakshmi Hebbalakar Drives lake development at Uchagaon
Laxmi Hebbalkar launched the Uchagaon Lake Development Project at a cost of 2 Crore. Improvement of lake area, construction of walking track, installation of street lights, and Many works are running..