ಔರಂಗಾಬಾದ್ ನಲ್ಲಿ ಭೀಕರ ಅಪಘಾತ : ರೈಲ್ವೆ ಹಳಿ ಮೇಲೆ ಮಲಗಿದ್ದ 17 ಮಂದಿ ವಲಸೆ ಕಾರ್ಮಿಕರ ದಾರುಣ ಸಾವು

ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಭೀಕರ ಅಪಘಾತದಲ್ಲಿ 17 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದು 17 ಮಂದಿ ವಲಸೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ದುರಂತ ಘಟನೆ ನಡೆದಿದೆ. ವಲಸೆ ಕಾರ್ಮಿಕರು ಊರಿಗೆ ಹೋಗುವ ಉದ್ದೇಶದಿಂದ ರೈಲ್ವೆ ಹಳಿ ಮೇಲೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರು, ಮಾರ್ಗಮದ್ಯ ಎಲ್ಲರೂ ರಾತ್ರಿ ನಿದ್ರೆಗೆ ಜಾರಿದ್ದರು.

ಔರಂಗಾಬಾದ್ : ವೈಜಾಗ್ ಅನಿಲ ಸೋರಿಕೆ ಘಟನೆಯ ಆಘಾತದಿಂದ ದೇಶ ಇನ್ನೂ ತತ್ತರಿಸುತ್ತಿರುವಾಗ, ಇಂದು ಬೆಳಿಗ್ಗೆ ಭಾರತದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಶುಕ್ರವಾರ, ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ಗೂಡ್ಸ್ ರೈಲಿನ ಭೀಕರ ಅಪಘಾತದಿಂದ ರೈಲ್ವೆ ಹಳಿಗಳ ಮೇಲೆ ಮಲಗಿದ್ದ 17 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ತಮ್ಮ ಊರುಗಳನ್ನು ಸೇರಲು ಈ ಕಾರ್ಮಿಕರು ರೈಲು ಹಳಿಗಳ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು ಮತ್ತು ಮಾರ್ಗಮದ್ಯ ರೈಲ್ವೆ ಹಾಲಿ ಮೇಲೆ ಮಲಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದುರಂತ ಘಟನೆಯಲ್ಲಿ ಪ್ರಾಣ ಕಳೆದುಕೊಂಡ ವಲಸೆ ಕಾರ್ಮಿಕರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖಿತರಾಗಿದ್ದಾರೆ ಮತ್ತು “ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿ ಹೆಚ್ಚಿನ ಮಾಹಿತಿ ಪಡೆದಿದ್ದಾರೆ ಮತ್ತು ಸದ್ಯ ಸ್ಥಳದಲ್ಲಿ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ”

ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಭೀಕರ ಅಪಘಾತದಲ್ಲಿ 17 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಭೀಕರ ಅಪಘಾತದಲ್ಲಿ 17 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಔರಂಗಾಬಾದ್ ನ ಕರ್ಮಡ್ ಪೊಲೀಸ್ ಠಾಣೆ ಸರಹದ್ದಿನ ಪರ್ಬನಿ-ಮನ್ಮಡ್ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಗೂಡ್ಸ್ ರೈಲು ಜಲ್ನಾದಿಂದ ಔರಂಗಾಬಾದ್ ಕಡೆಗೆ ಸಂಚರಿಸುತ್ತಿತ್ತು. ಛತ್ತೀಸ್ ಗಢ ಮೂಲಕ ವಲಸೆ ಕಾರ್ಮಿಕರು ಹಳಿ ಮೇಲೆ ಏಕೆ ಮಲಗಿದ್ದರು ಎಂಬ ಬಗ್ಗೆ ಮತ್ತು ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಔರಂಗಾಬಾದ್ ಎಸ್ಪಿ ಮೊಕ್ಷಡ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರೈಲ್ವೆ ಸಚಿವಾಲಯ, ಹಳಿ ಮೇಲೆ ಕಾರ್ಮಿಕರು ಮಲಗಿರುವುದನ್ನು ಕಂಡು ಗೂಡ್ಸ್ ರೈಲಿನ ಲೊಕೊ ಪೈಲಟ್ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ಆಕಸ್ಮಿಕವಾಗಿ ರೈಲು ಕಾರ್ಮಿಕರ ದೇಹದ ಮೇಲೆ ಹರಿದುಹೋಯಿತು. ಈ ಬಗ್ಗೆ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದೆ.