ವೃತ್ತಿನಿರತ ಪತ್ರಕರ್ತರಿಗೆ ವಿಮೆ, ಪತ್ರಕರ್ತರ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ವೃತ್ತಿನಿರತ ಪತ್ರಕರ್ತರ ಕೋವಿಡ್ ವಿಮೆಗೆ ಸ್ಪಂದಿಸಿದ್ದಾರೆ.

ಕಾರ್ಯನಿರತ ಪತ್ರಕರ್ತರ ಮನವಿಗೆ ಸ್ಪಂದಿಸಿರುವ ಸಿಎಂ ಯಡಿಯೂರಪ್ಪ ಅವರು ಕೋವಿಡ್‌ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರ ಕೋವಿಡ್ ವಿಮೆಗೆ ಭರವಸೆ ನೀಡಿದ್ದಾರೆ. ಈ ಬಗ್ಗೆ ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ ಮೂಲಕ ತಿಳಿಸಿದ್ದಾರೆ.

ಬೆಂಗಳೂರು: ಪತ್ರಕರ್ತರ ಕೋವಿಡ್ ವಿಮೆಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು, ‘ಕೊರೊನಾ ವಾರಿಯರ್ಸ್‌’ ಆಗಿ ಕಾರ್ಯ ನಿರ್ವಹಿಸುತ್ತಿರುವ ವೃತ್ತಿನಿರತ ಪತ್ರಕರ್ತರಿಗೆ ಕೋವಿಡ್‌ ವಿಮೆ ಸೌಕರ್ಯ ವಿಸ್ತರಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಈ ವಿಚಾರವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಸಿಎಂ ಬಿ.ಎಸ್‌.ಯಡಿಯೂರಪ್ಪ ರವರನ್ನು ಭೇಟಿಯಾಗಿ ಬುಧವಾರದಂದು ಮನವಿ ಸಲ್ಲಿಸಿದ್ದರು. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆನ್ನಲಾಗಿದೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯ ವೇಳೆ ಈ ಬಗ್ಗೆ ಸಿಎಂ ಯಡಿಯೂರಪ್ಪನವರು, ಕೋವಿಡ್‌ ಸಂದರ್ಭದಲ್ಲಿ ಕೆಲಸ ಮಾಡುವ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ, ಎನ್ನಲಾಗಿದೆ..

ಈ ಬಗ್ಗೆ ಟ್ವೀಟ್‌ ಮಾಡಿರುವ ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಕಾರ್ಯನಿರತ ಪತ್ರಕರ್ತರ ಮನವಿಗೆ ಸ್ಪಂದಿಸಿರುವ ಸಿಎಂ ಯಡಿಯೂರಪ್ಪ ರವರು ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರುವ ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ.