ಭೂಗತ ಲೋಕದ ಮಾಜಿ ದೊರೆ ಮುತ್ತಪ್ಪ ರೈ ನಿಧನ, ಮುತ್ತಪ್ಪ ರೈ ವಿಧಿವಶ

ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ, ಭೂಗತ ಲೋಕದ ಮಾಜಿ ದೊರೆ, ಡಾನ್ ಮುತ್ತಪ್ಪ ರೈ ನಿಧನ

ಭೂಗತ ಲೋಕದ ಮಾಜಿ ದೊರೆ ಮುತ್ತಪ್ಪ ರೈ ಒಂದು ವರ್ಷದ ಹಿಂದೆ ಕ್ಯಾನ್ಸರ್‌ಗೆ ತುತ್ತಾಗಿದ್ದರು ಕೆಲವು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ (68) ಶುಕ್ರವಾರ ನಸುಕಿನ ಎರಡು ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ಬೆಂಗಳೂರು (Kannada News) : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ, ಭೂಗತ ಲೋಕದ ಮಾಜಿ ದೊರೆ ಮುತ್ತಪ್ಪ ರೈ (68)  ಶುಕ್ರವಾರ ಸುಮಾರು ಬೆಳಿಗ್ಗೆ ಎರಡು ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುತ್ತಪ್ಪ ರೈ ಅವರು ವಿಧಿವಶ ವಾಗಿದ್ದಾರೆ.

ಮುತ್ತಪ್ಪ ರೈ ಅವರು ತಮ್ಮ ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಒಬ್ಬ ಸಹೋದರಿಯನ್ನು ಅಗಲಿದ್ದಾರೆ. ರಾಮನಗರ ತಾಲ್ಲೂಕಿನ  ಬಿಡದಿಯ ಅವರ ಸ್ವಗೃಹದಲ್ಲಿ ಕೆಲವೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕರಿಗೆ ಅಂತ್ಯಕ್ರಿಯೆ ಯಲ್ಲಿ ಪಾಲ್ಗೊಳ್ಳಲು ಅವಕಾಶ ಇರುವುದಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

ಮುತ್ತಪ್ಪ ರೈ- muthappa rai
ಮುತ್ತಪ್ಪ ರೈ- muthappa rai

ಪುತ್ತೂರಿನಲ್ಲಿ ನೆಟ್ಟಾಲ ನಾರಾಯಣ ರೈ ಮತ್ತು ಸುಶೀಲಾ ರೈ ದಂಪತಿಗೆ ಜನಿಸಿದ ಬಂಟ ಸಮುದಾಯದ ಮುತ್ತಪ್ಪ ರೈ ಅವರ ಮಾತೃ ಭಾಷೆ ತುಳು. ರೇಖಾ ಅವರನ್ನು ಮದುವೆಯಾದ ಮುತ್ತಪ್ಪ ರೈ ಅವರಿಗೆ ರಾಕಿ ಮತ್ತು ರಿಕ್ಕಿ ಎಂಬ ಇಬ್ಬರು ಮಕ್ಕಳಿದ್ದಾರೆ. 2013ರಲ್ಲಿ ಅವರ ಪತ್ನಿ ರೇಖಾ ಅವರು ಅನಾರೋಗ್ಯದಿಂದ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಇದೀಗ ಕ್ಯಾನ್ಸರ್​ನಿಂದಾಗಿ ಮುತ್ತಪ್ಪ ರೈ ಅವರು ಇಹಲೋಕ ತ್ಯಜಿಸಿದ್ದಾರೆ.

Web Title : Muthappa Rai Passes Away
(underworld Don Muthappa Rai, (68) founder of the Jaya Karnataka Organization, passed away at around 2 pm Friday)