ನಕಲಿ ಮದ್ಯದ ಹಾವಳಿ ತಡೆಗೆ ಕಠಿಣ ಕಾನೂನು ಕ್ರಮ ಅಗತ್ಯ- ರಮೇಶ್ ಜಾರಕಿಹೊಳಿ

ರಾಜ್ಯ ಸರ್ಕಾರ ನಕಲಿ ಮದ್ಯದ ಹಾವಳಿ ತಡೆಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ರಮೇಶ್ ಜಾರಕಿಹೊಳಿ ಸಲಹೆ ನೀಡಿದರು.

ಮದ್ಯಪಾನ ನಿಷೇಧದಿಂದ ನಕಲಿ ಮದ್ಯದ ಹಾವಳಿ ಹೆಚ್ಚಾಗುವ ಆತಂಕವಿದೆ. ಹೀಗಾಗಿ ನಕಲಿ ಮದ್ಯದ ಹಾವಳಿ ತಡೆಗೆ ಕಠಿಣ ಕಾನೂನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ (Kannada News) : ಬೆಳಗಾವಿ ಭಾಗದಲ್ಲಿ ನಕಲಿ ಮದ್ಯದ ಹಾವಳಿ ಹೆಚ್ಚಾಗಿದ್ದು ಇದನ್ನು ಕಠಿಣ ಕಾನೂನು ಕ್ರಮದ ಮೂಲಕ ಹತ್ತಿಕ್ಕಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಹೇಳಿದರು.

ಗೋಕಾಕ್‌ನಲ್ಲಿ ಶನಿವಾರ (ಮೇ ೧೬) ಫಲಾನುಭವಿ ವಿಕಚೇತನರಿಗೆ ದ್ವಿಚಕ್ರ ವಾಹನ ವಿತರಿಸಿ ಮಾತನಾಡಿದ ಅವರು ಮದ್ಯಪಾನ ನಿಷೇಧದ ಬಗ್ಗೆ ರಾಜ್ಯ ಸರ್ಕಾರದ ನಿರ್ಧಾರವೇ ಅಂತಿಮ ಎಂದರು.

ಈಗಾಗಲೇ ಗುಜರಾತ್ ರಾಜ್ಯದಲ್ಲಿ ಮದ್ಯಪಾನ ನಿಷೇಧ ಜಾರಿಯಲ್ಲಿದೆ ಆದರೆ ಅದು ಯಶಸ್ವಿಯಾಗಿಲ್ಲ. ಆದರೆ ಮದ್ಯಪಾನ ನಿಷೇಧದಿಂದ ನಕಲಿ ಮದ್ಯದ ಹಾವಳಿ ಹೆಚ್ಚಾಗುವ ಆತಂಕವಿದೆ. ಹೀಗಾಗಿ ಈ ಕುರಿತು ಕಠಿಣ ಕಾನೂನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವರು ತಿಳಿಸಿದರು.

ಸಚಿವ ರಮೇಶ್ ಜಾರಕಿಹೊಳಿ
ಸಚಿವ ರಮೇಶ್ ಜಾರಕಿಹೊಳಿ

ಮದ್ಯ ನಿಷೇಧ ಮಾಡಬೇಕು ಎಂದು ಈಗಾಗಲೇ ಹಲವಾರು ಮಠಾಧಿಶರು ಮತ್ತು ಜನರು ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರ ಈ ಕುರಿತು ಕಠಿಣವಾದ ಕಾನೂನು ಜಾರಿಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.

ಮೇ.೧೭ ರ ಬಳಿಕ ಲಾಕ್‌ಡೌನ್ ಸಡಿಲಿಕೆಯಾಗುವ ಸಂಭವವಿದೆ. ಆದರೂ ಜನ ಸಾಮಾಜಿಕ ಅಂತರ ಕಾಪಾಡಿಕೊಂಡು ಜೀವಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದ ಸಚಿವರು ಪಂಚಾಯಿತಿ ಚುನಾವಣೆ ನಡೆಸುವುದರ ಬಗ್ಗೆ ಅಂತಿಮ ನಿರ್ಧಾರ ರಾಜ್ಯ ಸರ್ಕಾರ ತೆಗೆದುಕೊಳ್ಳಲಿದೆ ಎಂದರು.

Web Title : Strict legal action is needed to stop counterfeiting of liquor
Fake liquor in Belagavi area is on the rise and this will be curtailed by strict legal action, said Minister Ramesh Jarakiholi