ಇದ್ದ ಹಣವೆಲ್ಲಾ ಸಚಿವರ ಜೇಬಿಗೆ ಹೋಯಿತಾ ?

ಮುಖ್ಯಮಂತ್ರಿ ಯಡಿಯೂರಪ್ಪಗೆ ಸಿದ್ದರಾಮಯ್ಯ ಪ್ರಶ್ನೆ

🌐 Kannada News :

( Kannada News Today ) : ಬೆಂಗಳೂರು : ಇದ್ದ ಹಣವೆಲ್ಲಾ ಸಚಿವರ ಜೇಬಿಗೆ ಹೋಯಿತಾ ? : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಕಳೆದ ಒಂದು ವರ್ಷದಿಂದ ಹೇಳುತ್ತಲೇ ಇದ್ದಾರೆ.

ಕೊರೋನಾ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಸಹ ಸರ್ಕಾರದ ಬಳಿ ಹಣವಿಲ್ಲ, ಸರ್ಕಾರಿ ಉದ್ಯೋಗಿಗಳಿಗೆ ಸಂಬಳ ನೀಡುವುದಕ್ಕೂ ಸಹ ಹಣ ಇಲ್ಲ ಎಂದು ಕೆಲವು ಸಚಿವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ನಡುವೆ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನ್ಯಾಯವಾಗಿ ದೊರಕಬೇಕಿದ್ದ ಜಿಎಸ್‌ಟಿ ತೆರಿಗೆ ಪಾಲು ಹಾಗೂ
ನೆರೆ-ಬರ ಪರಿಹಾರ ಹಣವೂ ಸಹ ಈವರೆಗೆ ಸಿಕ್ಕಿಲ್ಲ.

ಈ ಕುರಿತು ಕಳೆದ ಒಂದು ವರ್ಷದಿಂದ ಸತತವಾಗಿ ದ್ವನಿ ಎತ್ತುತ್ತಿರುವ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಜಿಎಸ್‌ಟಿ ಪಾಲಿನ ಕುರಿತಾಗಿ ನಿರಂತರ ದಾಳಿ ನಡೆಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ “ಉತ್ತರ ಕೊಡಿ ಬಿಎಸ್‌ವೈ” ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿರುವ ಸಿದ್ದರಾಮಯ್ಯ, “ಪ್ರವಾಹ ಪೀಡಿತ ರೈತರಿಗೆ
ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ ೯೦,೦೦೦ ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ
ಹೋಯಿತಾ?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಆಗಸ್ಟ್ ನಲ್ಲಿ ಮೂರು ತಿಂಗಳು ಸುರಿದ ಮಳೆಯಿಂದಾಗಿ ೨೩ ಜಿಲ್ಲೆಗಳ ೧೩೦ ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ ೧೧ ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ.

ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ. ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಪರಿಹಾರ ಕೇಳಿದ್ದು ರೂ.೩೫,೦೦೦ ಕೋಟಿ, ಅವರು ನೀಡಿದ್ದು ರೂ.೧೬೫೪ ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ರೂ.೪೦೦೦ ಕೋಟಿ. ಕೇಂದ್ರದಿAದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ? ಉತ್ತರಕೊಡಿ_ಬಿಎಸ್‌ವೈ”
ಎಂದು ಸಿದ್ದರಾಮಯ್ಯ ಕೆಣಕಿದ್ದಾರೆ.

“ಕಳೆದ ವರ್ಷದ ಬೆಳೆಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ.
ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ.

ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು ೨,೨೪,೦೦೦, ಪರಿಹಾರ ನೀಡಿರುವುದು ಮಾತ್ರ ೧,೨೪,೦೦೦ ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಸರ್ಕಾರ ಪರಿಹಾರ ನೀಡುವುದು ಯಾವಾಗ? ಉತ್ತರಕೊಡಿ_ ಬಿಎಸ್‌ವೈ” ಎಂದಿದ್ದಾರೆ.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.