ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆ, ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯ

Chief Minister yediyurappa : ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ, ಪ್ರಕರಣದ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಗ್ವಿ ಪತ್ರಿಕಾಗೋಷ್ಠಿಯಲ್ಲಿ ಪತ್ರಿಕೆಯೊಂದರಲ್ಲಿ ಪ್ರಕಟವಾದ ಲೇಖನವನ್ನು ಉಲ್ಲೇಖಿಸಿ ಮಾತನಾಡಿದರು. 2020 ರ ಮಾರ್ಚ್ ಮತ್ತು ಜುಲೈ ನಡುವೆ ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ನಿರ್ದೇಶಕರಾಗಿದ್ದ  ಕೋಲ್ಕತ್ತಾದ ಏಳು ನಕಲಿ ಕಂಪೆನಿಗಳಿಗೆ 5 ಕೋಟಿ ರೂ.ಗಳು ವರ್ಗಾವಣೆಗೊಂಡಿದೆ ಎಂದು ಅವರು ಹೇಳಿದರು. ಈ  ಹಿನ್ನೆಲೆ ಪ್ರತಿಪಕ್ಷ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಯ ಮೇಲೆ ಟೀಕಾ ಪ್ರಹಾರ ಮಾಡಿದ್ದಲ್ಲದೆ ಪ್ರಕರಣದ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದೆ.

( Kannada News ) : ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S. Yediyurappa ) ಅವರ ರಾಜೀನಾಮೆಗೆ ಕಾಂಗ್ರೆಸ್ ಭಾನುವಾರ ಒತ್ತಾಯಿಸಿದೆ. ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಅವರು ಕೋಲ್ಕತ್ತಾದ ನಕಲಿ ಕಂಪನಿಗಳಿಂದ 5 ಕೋಟಿ ರೂ.ಗಳನ್ನು ನಿರ್ದೇಶಕರಾಗಿರುವ ಕಂಪನಿಗಳಿಗೆ ವರ್ಗಾಯಿಸಿದ್ದಾರೆ ಎಂಬ ಆರೋಪವಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಗ್ವಿ ಪತ್ರಿಕಾಗೋಷ್ಠಿಯಲ್ಲಿ ಪತ್ರಿಕೆಯೊಂದರಲ್ಲಿ ಪ್ರಕಟವಾದ ಲೇಖನವನ್ನು ಉಲ್ಲೇಖಿಸಿ ಮಾತನಾಡಿದರು. 2020 ರ ಮಾರ್ಚ್ ಮತ್ತು ಜುಲೈ ನಡುವೆ ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ನಿರ್ದೇಶಕರಾಗಿದ್ದ  ಕೋಲ್ಕತ್ತಾದ ಏಳು ನಕಲಿ ಕಂಪೆನಿಗಳಿಗೆ 5 ಕೋಟಿ ರೂ.ಗಳು ವರ್ಗಾವಣೆಗೊಂಡಿದೆ ಎಂದು ಅವರು ಹೇಳಿದರು. ಅಲ್ಲದೆ ಕರ್ನಾಟಕದ ಬಿಜೆಪಿ ಸರ್ಕಾರವು “ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ” ಎಂದು ಆರೋಪಿಸಿದ್ದಾರೆ

ಇದನ್ನೂ ಓದಿ : ಯಡಿಯೂರಪ್ಪ ಸಿಎಂ ಆಗಿ ಅಧಿಕಾರದಲ್ಲಿರಲು ನಾವೇ ಕಾರಣ : ಎಂಟಿಬಿ ನಾಗರಾಜ್

ಸ್ಪಷ್ಟವಾಗಿ ಭ್ರಷ್ಟಾಚಾರ ಮಾಡಿರುವುದು ಕಂಡು ಬರುತ್ತಿದೆ ಮತ್ತು ಈ ಸಂಬಂಧ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಡೆಸಬೇಕು ಎಂದು ಕೋರಿದ್ದಾರೆ. ಈ  ಹಿನ್ನೆಲೆ ಪ್ರತಿಪಕ್ಷ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಯ ಮೇಲೆ ಟೀಕಾ ಪ್ರಹಾರ ಮಾಡಿದ್ದಲ್ಲದೆ ಪ್ರಕರಣದ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದೆ.

ಭಯಪಡಲು ಏನೂ ಇಲ್ಲದಿದ್ದಾಗ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಫ್‌ಐಆರ್ ಏಕೆ ದಾಖಲಾಗಿಲ್ಲ ಎಂದರು, ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಅಥವಾ ಪಕ್ಷವೇ ಅವರನ್ನು ಉಚ್ಚಾಟಿಸಬೇಕು ಎಂದರು.

ಕರ್ನಾಟಕದಲ್ಲಿ ಭ್ರಷ್ಟಾಚಾರ ಮತ್ತು ದುರುಪಯೋಗ ವಿಪರೀತವಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏಕೆ ಮೌನವಾಗಿದ್ದಾರೆ ಎಂದು ಅವರು ಪ್ರಶ್ನಿಸಿದರು. “ಪ್ರಧಾನಿ ಖಂಡನೀಯ ಮೌನ ಇಟ್ಟುಕೊಂಡಿದ್ದಾರೆ” ಎಂದು ಅವರು ಹೇಳಿದರು.

Web Title : Congress demands resignation of Karnataka Chief Minister yediyurappa

Scroll Down To More News Today