ಹಾನಗಲ್‌ನಲ್ಲಿ ಕಾಂಗ್ರೆಸ್, ಸಿಎಂ ತವರು ಜಿಲ್ಲೆಯಲ್ಲಿಯೇ ಪಕ್ಷದ ಅಭ್ಯರ್ಥಿ ಸೋಲು
ಕರ್ನಾಟಕ ಉಪಚುನಾವಣೆಯಲ್ಲಿ (Karnataka by-Polls) ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಭಾರಿ ಮುಖಭಂಗವಾಗಿದೆ. ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯ ಹಾನಗಲ್ ಕ್ಷೇತ್ರದಲ್ಲಿ (Hanagal) ಆಡಳಿತಾರೂಢ ಬಿಜೆಪಿ (BJP) ಸೋಲು ಕಂಡಿದೆ.
ಬೆಂಗಳೂರು (Bangalore) : ಕರ್ನಾಟಕ ಉಪಚುನಾವಣೆಯಲ್ಲಿ (Karnataka by-Polls) ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಭಾರಿ ಮುಖಭಂಗವಾಗಿದೆ. ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯ ಹಾನಗಲ್ ಕ್ಷೇತ್ರದಲ್ಲಿ (Hanagal) ಆಡಳಿತಾರೂಢ ಬಿಜೆಪಿ (BJP) ಸೋಲು ಕಂಡಿದೆ.
ಹಾನಗಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 7,598 ಮತಗಳಿಂದ ಗೆಲುವು ಸಾಧಿಸಿದರು. ಮುಖ್ಯಮಂತ್ರಿಯವರ ಸ್ವಂತ ಜಿಲ್ಲೆಯಲ್ಲಿ ಆಡಳಿತ ಪಕ್ಷದ ಅಭ್ಯರ್ಥಿ ಸೋಲು ಕಂಡಿರುವುದು ಬಸವರಾಜ ಬೊಮ್ಮಾಯಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 100 ದಿನಗಳ ನಂತರ ಉಪಚುನಾವಣೆ ಬಂದಿತ್ತು.
ಆದರೆ, ಕರ್ನಾಟಕದಲ್ಲಿ ಉಪಚುನಾವಣೆ ನಡೆದ ಮತ್ತೊಂದು ಕ್ಷೇತ್ರವಾದ ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,185 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ರಮೇಶ ಭೂಸನೂರ 93,865 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 62,680 ಮತಗಳನ್ನು ಪಡೆದರು. ರಾಜ್ಯದಲ್ಲಿ ಒಂದು ಕ್ಷೇತ್ರದಲ್ಲಿ ಭಾರಿ ಬಹುಮತ ಪಡೆದಿರುವ ಬಿಜೆಪಿ, ಅವರ ಸ್ವಂತ ಜಿಲ್ಲೆಯ ಕ್ಷೇತ್ರದಲ್ಲಿ ಸಿಎಂ ಸೋಲು ಕಂಡಿರುವುದು ಸಿಎಂ ಇಮೇಜ್ ಗೆ ಧಕ್ಕೆ ತಂದಿದೆ.
ಹಾನಗಲ್‌ನಲ್ಲಿ ಶಾಸಕರಾಗಿದ್ದ ಸಿ. ಎಂ. ಉದಾಸಿ ನಿಧನದಿಂದ ಮತ್ತು ಸಿಂಧಗಿಯಲ್ಲಿ ಶಾಸಕರಾಗಿದ್ದ ಎಂ. ಸಿ. ಮುನಗೂಳಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಎರಡೂ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದ್ದ ಜೆಡಿಎಸ್ ಹೀನಾಯ ಸೋಲು ಕಂಡಿತು. 2018ರಲ್ಲಿ ಗೆದ್ದಿದ್ದ ಸಿಂದಗಿ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿತು.
Follow us On
Google News |