ದಿನಸಿ ಸಾಮಗ್ರಿಗಳ ವಿತರಣೆ : ಅರವಿಂದ ಲಿಂಬಾವಳಿ ಫೋಟೋ, ಎಚ್ಡಿಕೆ, ಡಿಕೆಶಿ ಗರಂ

HDK and DKS Angry about Aravind Limbavali Photo on groceries distribution box

🌐 Kannada News :

ಬೆಂಗಳೂರು: ಬಿಜೆಪಿ ನಾಯಕರು ಕೊರೋನಾ ಪರಿಹಾರ ವಿತರಣೆಯ ವಿಷಯದಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕೆರಳಿದ್ದಾರೆ.

ಕೊರೋನಾ ಸಂತ್ರಸ್ತ ಬಡವರಿಗೆ ವಿತರಣೆ ಮಾಡಲಾಗುತ್ತಿರುವ ಸರಕಾರ ಪರಿಹಾರ ಪೊಟ್ಟಣಗಳ ಮೇಲೆ ಬಿಜೆಪಿ ನಾಯಕರ ಚಿತ್ರ ಇರುವುದಕ್ಕೆ ಇಬ್ಬರೂ ಕೆಂಡ ಕಾರಿದ್ದಾರೆ.

ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ ಎಂದು ಕುಮಾರಸ್ವಾಮಿ ಟ್ವೀಟಿಸಿದ್ದಾರೆ.

ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪ ಉತ್ತರ ಹೇಳುವರೇ?

ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ ಎಂದು ಎಚ್ಡಿಕೆ ಪ್ರಶ್ನೆ ಮಾಡಿದ್ದಾರೆ,

ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಈ ಬೆಳವಣಿಗೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಅಗತ್ಯ ಬಿದ್ದರೆ ಇದರ ವಿರುದ್ಧ ಹೋರಾಟ ನಡೆಸುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Web Title : HDK and DKS Angry about Aravind Limbavali Photo on groceries distribution box

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.