ನನಗೂ ನೊಟೀಸ್ ಕೊಡಬಹುದು – ಡಿಕೆಶಿ ಲೇವಡಿ
ಕಾಂಗ್ರೆಸ್ ಜನರ ಹಿತಕ್ಕಾಗಿ, ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಅದು ಮೂರು ಇರಲಿ, ಮೂವತ್ತು ಇಲಾಖೆ ಇರಲಿ, ಸರ್ಕಾರದ ವೈಫಲ್ಯದ ಬಗ್ಗೆ ವಿರೋಧ ಪಕ್ಷವಾಗಿ ತನ್ನ ಕೆಲಸ ಮಾಡಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
‘ಕಾಂಗ್ರೆಸ್ ಜನರ ಹಿತಕ್ಕಾಗಿ, ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಅದು ಮೂರು ಇರಲಿ, ಮೂವತ್ತು ಇಲಾಖೆ ಇರಲಿ, ಸರ್ಕಾರದ ವೈಫಲ್ಯದ ಬಗ್ಗೆ ವಿರೋಧ ಪಕ್ಷವಾಗಿ ತನ್ನ ಕೆಲಸ ಮಾಡಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ “ಕಾಂಗ್ರೆಸ್ ಪಕ್ಷ ಇನ್ನೂ 3 ಇಲಾಖೆ ಗುರಿಯಾಗಿಸಿ ಮಾಹಿತಿ ಕಲೆಹಾಕುತ್ತಿದೆಯೇ” ಎಂಬ ಪ್ರಶ್ನೆಗೆ ಈ ಮೇಲಿನಂತೆ ಉತ್ತರಿಸಿದರು.
ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಸೇರುವುದಿಲ್ಲ ಎಂಬ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, `ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಅನೇಕ ಸಲಹೆ ಕೊಟ್ಟಿದ್ದು, ಬಹಳ ಸಂತೋಷದಿಂದ ಸ್ವೀಕಾರ ಮಾಡಿದ್ದು, ವಾರಗಟ್ಟಲೆ ಚರ್ಚೆ ಮಾಡಿದ್ದೇವೆ.
ನಮ್ಮ ಪಕ್ಷ ತನ್ನದೇ ಆದ ಇತಿಹಾಸ ಹೊಂದಿದ್ದು. ಪಕ್ಷವನ್ನು ಕಾರ್ಪೊರೇಟ್ ಆಫೀಸ್‌ನಂತೆ ನಡೆಸಲು ಆಗುವುದಿಲ್ಲ. ಅವರ ಸಲಹೆಗಳನ್ನು ನಾವು ಗೌರವಿಸಿದ್ದೇವೆ. ಅವರಿಗೆ ಅಭಿನಂದಿಸುತ್ತೇವೆ.
ರಾಷ್ಟ್ರಮಟ್ಟದಲ್ಲಿ ಚರ್ಚೆ ಮಾಡಿ ಈ ವಿಚಾರವಾಗಿ ತೀರ್ಮಾನ ಕೈಗೊಂಡಿದ್ದು, ನಾನು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ. ರಾಷ್ಟ್ರಮಟ್ಟದ ನಾಯಕರ ತೀರ್ಮಾನವನ್ನು ನಾವು ಪಾಲಿಸುತ್ತೇವೆ’ ಎಂದರು.
ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, `ಈ ವಿಚಾರ ನಾನು ಕೇಳಿದ್ದೇನೆ. ಈ ಬಗ್ಗೆ ನಾನು ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಒಂದು ಪಕ್ಷದ ರಾಜ್ಯ ಅಧ್ಯಕ್ಷನಾಗಿ ಖಚಿತ ಮಾಹಿತಿ ಇಲ್ಲದೆ ಹೇಳಿಕೆ ನೀಡಲು ಸಾಧ್ಯವಿಲ್ಲ. ಮಾಹಿತಿ ಇಲ್ಲದೆ ಮಾತನಾಡಿದರೆ ನನಗೂ ನೊಟೀಸ್ ಕೊಡಬಹುದು’ ಎಂದು ಡಿಕೆಶಿ ಲೇವಡಿ ಮಾಡಿದರು
Follow us On
Google News |