ವಾಣಿಜ್ಯೋದ್ಯಮಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ, ಕೈಗಾರಿಕೆ ಪುನರಾರಂಭಕ್ಕೆ ಸಿದ್ಧತೆ

Karnataka Chief Minister BS Yediyurappa held meeting with industries

ವಾಣಿಜ್ಯೋದ್ಯಮಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ, ಕೈಗಾರಿಕೆ ಪುನರಾರಂಭಕ್ಕೆ ಸಿದ್ಧತೆ

ಮೇ 4 ರ ನಂತರ ಪ್ರಧಾನಮಂತ್ರಿಯವರಿಂದ ಕೈಗಾರಿಕೆಗಳ ಪುನರಾರಂಭಕ್ಕೆ ಕುರಿತ ಮಾರ್ಗಸೂಚಿಗಳನ್ನು ನಿರೀಕ್ಷಿಸಲಾಗುತ್ತಿದೆ, ಈ ಸಂಬಂಧ ಕೈಗಾರಿಕೆಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರು ಕೈಗಾರಿಕೋದ್ಯಮಿಗಳಿಗೆ ಸಲಹೆ ನೀಡಿದ್ದಾರೆ.

ಹೌದು, ಲಾಕ್‌ಡೌನ್ ಮುಕ್ತಾಯದ ಬಳಿಕ ರಾಜ್ಯದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ಕೈಗಾರಿಕೋದ್ಯಮಿಗಳು ಹಾಗೂ ಆರ್ಥಿಕ ಕ್ಷೇತ್ರದ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು.

ಕೈಗಾರಿಕೆ ಪುನರಾರಂಭಕ್ಕೆ ಸಿದ್ಧತೆ: ವಾಣಿಜ್ಯೋದ್ಯಮಿಗಳೊಂದಿಗೆ ಮುಖ್ಯಮಂತ್ರಿ ಸಭೆ

ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೈಗಾರಿಕೋದ್ಯಮಿಗಳು ಹಾಗೂ ಆರ್ಥಿಕ ಕ್ಷೇತ್ರದ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಯಡಿಯೂರಪ್ಪ, ಲಾಕ್‌ಡೌನ್ ಮುಕ್ತಾಯದ ಬಳಿಕ ಹಂತ ಹಂತವಾಗಿ ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಹಾಗು ಸಭೆಯಲ್ಲಿ ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ನೀಡಿದ ಉದ್ಯಮಿಗಳು, ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣ ನಿರ್ವಹಣೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಉದ್ಯಮಿಗಳಿಗೆ ಮುಖ್ಯಮಂತ್ರಿಗಳು ಕೆಲವೊಂದು ಮಾರ್ಗಸೂಚಿಗಳನ್ನು ತಿಳಿಸಿದರು.

  •  ಕಾರ್ಮಿಕರ ವೇತನವನ್ನು ತಪ್ಪದೆ ಪಾವತಿಸುವಂತೆ ಸೂಚಿಸಿದರು.
  • ಕಾರ್ಮಿಕರು/ ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಲು ತಿಳಿಸಿದರು.
  • ಮಾಸ್ಕ್ , ಸಾಮಾಜಿಕ ಅಂತರ, ಸ್ವಚ್ಛತೆ ಮುಂತಾದ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯದಲ್ಲಿ ಈಗಾಗಲೇ ಹಸಿರು ವಲಯಗಳಲ್ಲಿ ಕೈಗಾರಿಕೆ ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ. ಮೇ 4 ರ ನಂತರ ಕೇಂದ್ರ ಸರ್ಕಾರದಿಂದ ಬರುವ ಮಾರ್ಗಸೂಚಿಗಳ ನಿರೀಕ್ಷಿಸಲಾಗುತ್ತಿದೆ. ಮಾರ್ಗಸೂಚಿಯನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಿಮ್ಮೆಲ್ಲರ ಸಮಸ್ಯೆಗಳನ್ನು ಸರ್ಕಾರ ಸಹಾನುಭೂತಿಯಿಂದ ಪರಿಶೀಲಿಸಲಿದೆ. ಬೇಡಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸರ್ಕಾರದ ಇತಿ ಮಿತಿಯಲ್ಲಿ ಸಾಧ್ಯವಾದಷ್ಟು ಸ್ಪಂದಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಕಾರ್ಖಾನೆ ಮಾಲೀಕರು, ಕೆಲಸಗಾರರ ದುಡಿಮೆಯ ಅವಧಿ ಹೆಚ್ಚಳಕ್ಕೆ ಮನವಿ ಸಲ್ಲಿಸಿದಲ್ಲಿ ಕಾರ್ಮಿಕ ಇಲಾಖೆಯಿಂದ ಅನುಮತಿ ನೀಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಲಾಯಿತು.

ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ, ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್, ಎಫ್ ಕೆ ಸಿ ಸಿ ಐ, ಸಣ್ಣ ಕೈಗಾರಿಕೆಗಳ ಸಂಘ, ಫಿಕ್ಕಿ, ಸಿಐಐ, ಅವೇಕ್, ಅಸೋಚಾಂ, ಬಿಸಿಐಸಿ, ಮಹಿಳಾ ಉದ್ಯಮಿಗಳ ಒಕ್ಕೂಟ ಮತ್ತಿತರ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Web Title : Karnataka Chief Minister BS Yediyurappa held meeting with industries

Contact for web design services Mobile