ಕನ್ನಡ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ರಾಜೀನಾಮೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಕನ್ನಡ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿಕ್ಕಮಗಳೂರಿನಿಂದ ನಾಲ್ಕು ಬಾರಿ ಶಾಸಕರಾಗಿರುವ ಸಿ.ಟಿ.ರವಿ ಶನಿವಾರ ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರಿಗೆ ಸಲ್ಲಿಸಿದರು.

ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಇನ್ನೂ ಸ್ವೀಕರಿಸಿಲ್ಲ.

ಸೆಪ್ಟೆಂಬರ್ 26 ರಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಸಿ.ಟಿ.ರವಿ ಸೋಮವಾರ ಬಿಜೆಪಿ ಕೇಂದ್ರ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹಾರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಸಿದ್ಧ ಕನ್ನಡದ ಸಾಹಿತಿ ಡಿ.ವಿ.ಗುಂಡಪ್ಪ ಬರೆದ “ಮಂಕುತಿಮ್ಮನ ಕಗ್ಗ” ದ ಜನಪ್ರಿಯ ಪದ್ಯಗಳಲ್ಲಿ ಒಂದನ್ನು ಸಿ.ಟಿ.ರವಿ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

  • ಸಿ.ಟಿ.ರವಿ ಕಳೆದ ಗುರುವಾರ ತಮ್ಮ ತವರು ಜಿಲ್ಲಾ ಕೇಂದ್ರ ಪಟ್ಟಣವಾದ ಚಿಕ್ಕಮಗಳೂರಿನಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆಗೆ ಸಿದ್ಧಪಡಿಸಿದ್ದಾಗಿ ಹೇಳಿದ್ದಾರೆ.
Scroll Down To More News Today