ಕೋಡಿಹಳ್ಳಿ ಚಂದ್ರಶೇಖರ್‌ ಬಗ್ಗೆ ಸಚಿವ ಈಶ್ವರಪ್ಪ ಆಕ್ರೋಶ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಮಾತನಾಡಿ, ರಾಜ್ಯದ ಎಲ್ಲಾ ಸಂಘ ಸಂಸ್ಥೆಗಳು ಕೊಡಿಹಳ್ಳಿ ಚಂದ್ರಶೇಖರ್ ಬಗ್ಗೆ ಎಚ್ಚರದಿಂದಿರಬೇಕು ಎಂದು ಹೇಳಿದರು.

(Kannada News) : ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ (KS Eshwarappa) ಮಾತನಾಡಿ, ರಾಜ್ಯದ ಎಲ್ಲಾ ಸಂಘ ಸಂಸ್ಥೆಗಳು ಕೊಡಿಹಳ್ಳಿ ಚಂದ್ರಶೇಖರ್ (Kodihalli Chandrashekhar) ಬಗ್ಗೆ ಎಚ್ಚರದಿಂದಿರಬೇಕು ಎಂದು ಹೇಳಿದರು.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸಾಮಾಜಿಕ ವಿನಾಶಕಾರಿ ಶಕ್ತಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಕಾರ್ಮಿಕರ ಹತ್ತು ಬೇಡಿಕೆಗಳಲ್ಲಿ ಎಂಟಕ್ಕೆ ಸರ್ಕಾರ ಸಮ್ಮತಿಸಿದೆ ಎಂದು ಅವರು ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಆದರೆ, ಎರಡನ್ನು ಒಪ್ಪಿಲ್ಲ. ಮಾತುಕತೆಗೆ ಒಪ್ಪಿದವರು ಈಗ ಉಲ್ಟಾ ಹೊಡೆದಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರು ಒಂದು ಲಕ್ಷ ಕೆಎಸ್‌ಆರ್‌ಟಿಸಿ (KSRTC) ನೌಕರರನ್ನು ದಾರಿತಪ್ಪಿಸಿದ್ದಾರೆ ಎಂಬ ಆರೋಪಿಸಿದರು.

Web Title : ks eshwarappa hit back against kodihalli chandrashekhar