ಏಪ್ರಿಲ್ 30 ರವರೆಗೆ ಲಾಕ್‌ಡೌನ್ ವಿಸ್ತರಣೆ, ಸಿಎಂ ಯಡಿಯೂರಪ್ಪ ಘೋಷಣೆ

Lockdown extension till April 30, announced by CM Yeddyurappa

🌐 Kannada News :

ಬೆಂಗಳೂರು: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಏಪ್ರಿಲ್ 30 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಇನ್ನೆರಡು ದಿನಗಳಲ್ಲಿ ಲಾಕ್ಡೌನ್ ಸಂಬಂಧಿಸಿದ ಕೆಲ ಮಾರ್ಗಸೂಚಿಯನ್ನು ಕೇಂದ್ರ ಬಿಡುಗಡೆ ಮಾಡಲಿದೆ. ಕೃಷಿ, ಕೈಗಾರಿಕೆ, ಕಾರ್ಮಿಕರಿಗೆ ಉದ್ಯೋಗಕ್ಕೆ ಅನುಕೂಲ ಕಲ್ಪಿಸುವ ಜತೆಗೆ ಸರ್ಕಾರಿ ಕಚೇರಿಗಳನ್ನು ಭಾಗಶಃ ಆರಂಭಿಸಲು ಅನುಮತಿ ನೀಡಲಾಗುವುದು.

ಮುಂದಿನ ಎರಡು ವಾರಗಳ ಕಾಲ ಲಾಕ್ ಡೌನ್ ಹಿಂದಿನ 3 ವಾರಗಳಿಗಿಂತ ವಿಭಿನ್ನವಾಗಿರುತ್ತದೆ. ವಿಶೇಷವಾಗಿ ಆರ್ಥಿಕ ಚಟುವಟಿಕೆಗಳಿಗೆ ಸಹಾಯವಾಗುವಂತೆ, ಕೃಷಿ ಮತ್ತು ಕೈಗಾರಿಕೆ ಹಾಗೂ ಕಾರ್ಮಿಕರಿಗೆ ಉದ್ಯೋಗದ ದೃಷ್ಟಿಯಿಂದ ಕೆಲವು ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಲಿದೆ ಎಂದು ಬಿಎಸ್ವೈ ಹೇಳಿದರು.

ಪ್ರಧಾನಮಂತ್ರಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ನಾಲ್ಕು ಗಂಟೆ ಸುಧೀರ್ಘ ಚರ್ಚೆ ನಡೆಸಿದ್ದಾರೆ. ಪ್ರಮುಖವಾಗಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ ಎಚ್ಚರ ವಹಿಸಲು ಸೂಚಿಸಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಬೆಳವಣಿಗೆಯ ದರ ಲಾಕ್ ಡೌನ್ ನಂತರ ಶೇ. 28 ರಿಂದ ಶೇ. 14 ಕ್ಕೆ ಇಳಿದಿರುವುದು ಸಮಾಧಾನದ ಸಂಗತಿ ಎಂದು ಪ್ರಧಾನಿ ಹೇಳಿದ್ದಾಗಿ ಸಿಎಂ ತಿಳಿಸಿದ್ದಾರೆ.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.