ಉಮೇಶ ಕತ್ತಿ, ಸಿ.ಪಿ.ಯೋಗೇಶ್ವರ್, ಅರವಿಂದ ಲಿಂಬಾವಳಿಗೆ ದೊಡ್ಡ ಶಾಕ್

Many MLA'S were shocked for the BJP's high command decision

ಕನ್ನಡ ನ್ಯೂಸ್ ಟುಡೇPolitics News

ಬೆಂಗಳೂರು – ಉಮೇಶ ಕತ್ತಿ, ಸಿ.ಪಿ.ಯೋಗೇಶ್ವರ್, ಅರವಿಂದ ಲಿಂಬಾವಳಿಗೆ ಬಿಜೆಪಿ ದೊಡ್ಡ ಶಾಕ್ ನೀಡಿದೆ. ಇನ್ನೇನು ಒಂದು ದಿನದಲ್ಲಿ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಬಹುದು ಎನ್ನುವ ನಿರೀಕ್ಷೆಯಲ್ಲಿದ್ದ ಇವರಿಗೆ ಬಿಜೆಪಿ ಹೈಕಮಾಂಡ್ ಕೈ ಕೊಟ್ಟಿದೆ.

ಗುರುವಾರ ಕೇವಲ 10 ಹೊಸ ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೂಲ ಬಿಜೆಪಿಯ ಮೂವರು ಮಂತ್ರಿಗಳಾಗಲಿದ್ದಾರೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಇಂದು ಮುಂಜಾನೆಯವರೆಗೂ ಕತ್ತಿ, ಲಿಂಬಾವಳಿ ಮತ್ತು ಯೋಗೇಶ್ವರ್ ಸಚಿವರಾಗಲಿದ್ದಾರೆ ಎನ್ನುವ ಸ್ಪಷ್ಟ ಸೂಚನೆ ಇತ್ತು.

ಉಮೇಶ ಕತ್ತಿ, ಸಿ.ಪಿ.ಯೋಗೇಶ್ವರ್, ಅರವಿಂದ ಲಿಂಬಾವಳಿಗೆ ದೊಡ್ಡ ಶಾಕ್ - Kannada News

ಯೋಗೇಶ್ವರ ಕ್ಷೇತ್ರದಲ್ಲಿ ಸಚಿವ ಯೋಗೇಶ್ವರ್ ಅವರಿಗೆ ಅಭಿನಂದನೆಗಳು ಎನ್ನುವ ಫ್ಲೆಕ್ಸ್ ಗಳು ಕೂಡ ರಾರಾಜಿಸುತ್ತಿದ್ದವು. ಸಂಭ್ರಮಾಚರಣೆಗೂ ಸಿದ್ದತೆ ನಡೆದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಬಿಜೆಪಿ ಹೈಕಮಾಂಡ್ ಕೇವಲ ಹೊಸ 10 ಶಾಸಕರಿಗೆ ಮಾತ್ರ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡಿದೆ.

ಈ ವೇಳೆ ಪ್ರತಿಕ್ರಿಯಿಸಿದ ಉಮೇಶ ಕತ್ತಿ, ಅವಕಾಶ ಕೊಟ್ಟರೆ ಪ್ರಮಾಣ ವಚನ ಸ್ವೀಕರಿಸುತ್ತೇನೆ, ಇಲ್ಲವಾದಲ್ಲಿ ಶಾಸಕನಾಗಿ ಮುಂದುವರಿಯುತ್ತೇನೆ ಎಂದಿದ್ದಾರೆ. ಈ ಹಿಂದೆ ಸಚಿವ ಸ್ಥಾನ ಸಿಗದೆ ತೀವ್ರ ಅಸಮಾಧಾನಗೊಂಡಿದ್ದ ಕತ್ತಿ, ಈಗ ಮತ್ತೊಮ್ಮೆ ದೊಡ್ಡ ಶಾಕ್ ಗೆ ಒಳಗಾಗಿದ್ದಾರೆ. ಅವರ ಮುಂದಿನ ನಿರ್ಧಾರ ತೀವ್ರ ಕುತೂಹಲ ಮೂಡಿಸಿದೆ.

Web Title : Many MLA’S were shocked for the BJP’s high command decision
Quick Links : Kannada Politics News | Karnataka Politics News
ಕನ್ನಡ ನ್ಯೂಸ್ ನವೀಕರಣಗಳಿಗಾಗಿ ನಮ್ಮ  Facebook  | Twitter । YouTube News Channel ಅನುಸರಿಸಿ. Latest News ಜೊತೆಗೆ Breaking News ನೀವಿರುವಲ್ಲಿಯೇ ಪಡೆಯಿರಿ.


 

Follow us On

FaceBook Google News

Read More News Today